ಮತ್ತೊಂದು ಶಾಕ್, ಇನ್ನು ಮುಂದೆ ಪ್ರತಿ ತಿಂಗಳು ಬಸ್ ಟಿಕೆಟ್ ಪರಿಷ್ಕರಣೆ!

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಸಿದ್ದವಾಗಿದೆ. ತೈಲ ಬೆಲೆ ಹೆಚ್ಚಳದಿಂದಾಗಿ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ದಿನೇ ದಿನೇ ತೈಲ ಬೆಲೆ ಹೆಚ್ಚಳವಾಗ್ತಿದೆ. ಅನಿವಾರ್ಯವಾಗಿ ಟಿಕೆಟ್ ದರ ಹೆಚ್ಚಿಸಬೇಕಾಗಿದೆ. ಹೀಗಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

ಈ ವಾರದಲ್ಲಿ ಸಿಎಂ ಕುಮಾರಸ್ವಾಮಿ ಜೊತೆ ಮಾತನಾಡಿ ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ. ಈಗಾಗಲೇ 18% ಟಿಕೆಟ್ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗಾಗಿ ಸಿಎಂ ಜೊತೆ ಅಂತಿಮವಾಗಿ ಚರ್ಚಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.

ಈ ಕುರಿತು ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿದೇಶಕರಾದ ಉಮಾ ಶಂಕರ್ ಪ್ರತಿಕ್ರಿಯಿಸಿ, ದಿನೇ ದಿನೇ ತೈಲ ಬೆಲೆಗಳು ಏರಿಕೆಯಾಗುತ್ತಿರುವುದಿಂದ ನಿಗಮಕ್ಕೆ ಆರ್ಥಿಕ ಹೊರೆ ಉಂಟಾಗುತ್ತಿದೆ. ಕೂಡಲೇ ಸರ್ಕಾರ ಸಾರಿಗೆ ನಿಗಮಗಳ ನೆರವಿಗೆ ಆಗಮಿಸಬೇಕು. ಈಗಾಗಲೇ ಸರ್ಕಾರಕ್ಕೆ ಪ್ರತಿ ತಿಂಗಳು ಪ್ರಯಾಣದರವನ್ನು ಪರಿಷ್ಕರಣೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ಟೋಬರ್ ನಿಂದ ನಂದಿನಿ ಹಾಲಿನ ದರ ಹೆಚ್ಚಳ?

ಕಳೆದ 5 ವರ್ಷಗಳಿಂದಲೂ ಬಸ್ ದರ ಏರಿಕೆಯಾಗಿಲ್ಲ. ಇದರಿಂದಾಗಿ ನಷ್ಟದಲ್ಲೇ ವಾಹನಗಳನ್ನು ಓಡಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರಯಾಣ ದರಗಳ ನಿಗದಿ ಪಡಿಸುವ ಬಗ್ಗೆ ಸಮಿತಿ ರಚನೆ ಮಾಡಿ, ಪ್ರತಿ ತಿಂಗಳು ಪರಿಷ್ಕರಣೆ ಮಾಡುವ ಯೋಜನೆಯನ್ನು ಜಾರಿಗೆ ತರಲಾಗುತ್ತದೆ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *