ಶಿವರಾತ್ರಿ ಹಬ್ಬಕ್ಕೆ ಹೆಚ್ಚುವರಿಯಾಗಿ 300 KSRTC ಬಸ್‍ಗಳ ಸಂಚಾರ

ಬೆಂಗಳೂರು: ದೇಶದಾದ್ಯಂತ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶಿವರಾತ್ರಿಯಂದು ಪರಮಶಿವನ ದರ್ಶನ ಪಡೆಯಲು ಭಕ್ತರು ದೇಶದ ವಿವಿಧ ಮೂಲೆಗಳಿಗೆ ಸಂಚರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಬೆಂಗಳೂರಿನಿಂದ ದೂರದ ಊರುಗಳಿಗೆ ಕೆಎಸ್ಆರ್‌ಟಿಸಿ ಸಂಚರಿಸುವವರಿಗೆ ಹೆಚ್ಚುವರಿ ಬಸ್‍ಗಳ ಸೇವೆ ನೀಡಿದೆ. ಜೊತೆಗೆ ಬೆಂಗಳೂರಿಗೆ ವಾಪಸಾಗಲು 23 ರಂದು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಸೇರಿದಂತೆ ಇನ್ನಿತರೆ ಸ್ಥಳಗಳಿಗೆ ವಿಶೇಷ ಹೆಚ್ಚುವರಿ ಬಸ್‍ಗಳ ಸಂಚರಿಸಲಿವೆ.

ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ಬಸ್‍ಗಳು ಸಂಚರಿಸಲಿವೆ. ಇನ್ನೂ ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಪ್ರದೇಶಗಳಿಗೆ ತೆರಳುವ ಐಷಾರಾಮಿ ಬಸ್‍ಗಳು ಶಾಂತಿನಗರದಲ್ಲಿನ ಡಿಪೋ 4 ಮತ್ತು ಡಿಪೋ 2ರ ಮುಂಭಾಗದಿಂದ ಕಾರ್ಯಾಚರಣೆಗೊಳ್ಳಲಿವೆ.

ನಾಲ್ಕಕ್ಕಿಂತ ಹೆಚ್ಚು ಮಂದಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್ ಒಮ್ಮೆಲೇ ಕಾಯ್ದಿರಿಸಿದರೆ ವಾಪಸ್ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ಸಿಗಲಿದೆಯೆಂದು ಕೆಎಸ್ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Comments

Leave a Reply

Your email address will not be published. Required fields are marked *