ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮನೆಯೊಡತಿಯ ಸಾವಿನಿಂದ ಆಹಾರ ತೊರೆದ ಶ್ವಾನ!

– ಶ್ವಾನದ ಮುನ್ಸೂಚನೆ ಇದ್ದರೂ ಎಡವಿದ್ವಿ!

ಬೆಳಗಾವಿ: ಪ್ರಯಾಗ್‍ರಾಜ್‍ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವಡಗಾವಿಯ ಮೇಘಾ ಹತ್ತರವಾಟ ಹಾಗೂ ಜ್ಯೋತಿ ಹತ್ತರವಾಟ ಅವರ ಮನೆಯ ಶ್ವಾನ ಆಹಾರ ತೊರೆದು ಬೇಸರದಲ್ಲಿ ಕುಳಿತಿದೆ.

ಪ್ರಯಾಗರಾಜ್‍ಗೆ ಹೋದಾಗಿಂದಲೂ ಶ್ವಾನ ಸನ್ನಿ ಸಪ್ಪೆಯಾಗಿ ಕುಳಿತಿದೆ. ಅವರು ಕುಂಭಮೇಳಕ್ಕೆ ತೆರಳಿದ ದಿನ ಸಹ ಶ್ವಾನ ಆಹಾರ ತ್ಯಜಿಸಿತ್ತು. ಈ ಮೂಲಕ ಶ್ವಾನ ದುರಂತದ ಮುನ್ಸೂಚನೆ ನೀಡಿತ್ತು ಎಂದು ಮೃತ ಮೇಘಾಳ ಸಹೋದರಿ ಮಾನಸಿ ದುಃಖ ಹೊರ ಹಾಕಿದ್ದಾರೆ.

ಮೇಘಾಳ ಹಠಕ್ಕಾಗಿ ಪ್ರಯಾಗರಾಜ್ ಕಳಿಸುವಂತಾಯಿತು. ಶ್ವಾನದ ಮುನ್ಸೂಚನೆ ಬಗ್ಗೆ ಇದ್ದರೂ ನಾವು ನಿರ್ಲಕ್ಷ್ಯ ಮಾಡಿದೆವು ಎಂದು ಮೇಘಾಳ ತಂದೆ ದೀಪಕ ಹತ್ತರವಾಟ ದುಃಖ ಹೊರಹಾಕಿದ್ದಾರೆ.

ಮೇಘಾ ಹಠ ಹಿಡಿದು ಪ್ರಯಾಗರಾಜ್‍ಗೆ ಹೋಗಿದ್ದಳು. ಅವಳೊಟ್ಟಿಗೆ ತಾಯಿಯನ್ನು ಕಳಿಸಿ ಇಬ್ಬರನ್ನ ಕಳೆದುಕೊಳ್ಳುವಂತಾಯಿತು ಎಂದು ಅವರ ಅಜ್ಜಿ ಕಣ್ಣೀರಿಟ್ಟಿದ್ದಾರೆ.