ದೇಶದ ಅಭಿವೃದ್ಧಿಗಾಗಿ ಶ್ರಮವಹಿಸಿ ದುಡಿಯುವ ಕಾರ್ಮಿಕರಿಗೆ ಮೋದಿ ಸಲಾಂ

ನವದೆಹಲಿ: ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಮಿಕ ವರ್ಗಕ್ಕೆ ಶುಭಾಶಯ ತಿಳಿಸಿದ್ದಾರೆ.

ಟ್ವಿಟ್ಟರ್ ಮೂಲಕ ಶುಭಕೋರಿದ ಪ್ರಧಾನಿ, ಇಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನವಾಗಿದ್ದು, ದೇಶದ ಅಭಿವೃದ್ಧಿಗಾಗಿ ಶ್ರಮವಹಿಸಿ ದುಡಿಯುವ ಕಾರ್ಮಿಕ ವರ್ಗಕ್ಕೆ ಕಾರ್ಮಿಕರ ದಿನಾಚರಣೆಯ ಶುಭಾಶಯ, ಶ್ರಮಯೇವ ಜಯತೇ ಅಂತಾ ತಿಳಿಸಿದ್ದಾರೆ.

8 ಗಂಟೆ ಕೆಲಸ ಮಾಡಬೇಕೆಂಬ ನೌಕರರ ಹೋರಾಟಕ್ಕೆ ಜಯ ಸಿಕ್ಕಿದ ದಿನವೂ ಇದಾಗಿದೆ. ವಿಶ್ವದಾದ್ಯಂತ ಆರ್ಥಿಕ ಮತ್ತು ಸಾಮಾಜಿಕ ಹಕ್ಕಿಗಾಗಿ ಕಾರ್ಮಿಕರು ಮಾಡುವ ತ್ಯಾಗ, ಸೇವೆಗಳಿಗೆ ಗೌರವ ನೀಡಲಾಗುತ್ತದೆ ಅಂತಾ ಹೇಳಿದ್ದಾರೆ.

ರಾಜಧಾನಿಯಲ್ಲಿ ಇಂದು ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ದೆಹಲಿಯಲ್ಲಿ ಇಂದು ನಡೆಯುವ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮೇ 1 ಕಾರ್ಮಿಕರ ದಿನವನ್ನು ಆಚರಿಸಲು ದೇಶದ ವಿವಿಧ ಭಾಗಗಳಲ್ಲಿ ಜಾಥಾಗಳು, ವಿಚಾರಗೋಷ್ಠಿಗಳು, ಸೆಮಿನಾರ್ ಗಳನ್ನು ಆಯೋಜಿಸಲಾಗಿದೆ.

Comments

Leave a Reply

Your email address will not be published. Required fields are marked *