ಬೀದರ್: ಸಾಲಬಾಧೆಯಿಂದ ಮನನೊಂದು ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಬರ್ಗಾನ್ ತಾಂಡದಲ್ಲಿ ನಡೆದಿದೆ.
ರಾಮ್‍ರಾವ್ ರಾಥೋಡ್ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ರಾಮ್‍ರಾವ್ ಖಾಸಗಿಯಾಗಿ ಸಾಲ ಮಾಡಿಕೊಂಡು ಅದನ್ನು ಮರುಪಾವತಿ ಮಾಡಲಾದಗೆ ಕಷ್ಟಪಡುತ್ತಿದ್ದರು. ಸಾಲಬಾಧೆಯಿಂದ ಬೇಸತ್ತ ಕಾರ್ಮಿಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಥೋಡ್ ಸಾವಿನಿಂದ ಮನನೊಂದಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply