ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ – ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿತ

ಬೆಳಗಾವಿ: ಉಪನ್ಯಾಸಕಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನಿಗೆ ಕಾಲೇಜಿನ ಸ್ಟಾಫ್ ರೂಮ್‍ನಲ್ಲಿ ಉಪನ್ಯಾಸಕಿಯರೇ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಏಪ್ರಿಲ್ 12ರಂದು ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಅಮಿತ್ ಬಸವಮೂರ್ತಿ ಎಂದು ಗುರುತಿಸಲಾಗಿದೆ. ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಬಸವಮೂರ್ತಿ ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸಿ ಉಪನ್ಯಾಸಕಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಅಲ್ಲದೇ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಉಪನ್ಯಾಸಕಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: 10 ವರ್ಷದಿಂದ ಹೆತ್ತ ತಾಯಿಯನ್ನೇ ಕೂಡಿ ಹಾಕಿದ್ದ ಮಕ್ಕಳು – ಮಹಿಳೆ ರಕ್ಷಣೆ

ಈ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಉಪನ್ಯಾಸಕಿಯರೆಲ್ಲಾ ಸೇರಿ ಆರೋಪಿಗೆ ಕಾಲಿನಿಂದ ಒದ್ದು, ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಿದ್ದಾರೆ. ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಅತಿಥಿ ಉಪನ್ಯಾಸಕಿಯರು ಖಾಯಂ ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ

Comments

Leave a Reply

Your email address will not be published. Required fields are marked *