ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯಲು ಕಳೆದ ರಾತ್ರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಈ ವೇಳೆ ಜನ ಸಾಗರದಿಂದ ಮಹಿಳೆಯರು ವೃದ್ಧರು ಅವಕಾಶ ಸಿಗದೇ ಇಂದು ಬೆಳಗ್ಗೆ ಶ್ರೀಗಳ ದರ್ಶನಕ್ಕೆ ಮುಂದಾಗಿದ್ದಾರೆ.
ರಾತ್ರಿ ವೇಳೆ ಬಂದಿರುವ ಭಕ್ತರು ಸಿದ್ದಗಂಗಾ ಮಠದ ಆವರಣದಲ್ಲಿಯೇ ಕೆಲಕಾಲ ವಿಶ್ರಾಂತಿಯನ್ನ ಪಡೆದರು. ಇಂದು ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಭಕ್ತರ ದಾಸೋಹಕ್ಕೆ ಯಾವುದೇ ಸಮಸ್ಯೆಯಾಗದೇ ಇರಲು ಮಠದ ಸುತ್ತಲೂ ಹತ್ತು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: 70ರ ದಶಕದಲ್ಲೇ ಗದ್ದುಗೆ ನಿರ್ಮಾಣಕ್ಕೆ ಜಾಗ ಸೂಚಿಸಿದ್ದ ಶ್ರೀ: ಭವನದ ವಿಶೇಷತೆ ಏನು?

ಸಿದ್ದಗಂಗಾ ಮಠದಲ್ಲಿ ಮಾತ್ರವಲ್ಲದೇ ಮಠದ ಭಕ್ತರಿಂದ ತುಮಕೂರು ಸುತ್ತಮುತ್ತಲಿನ ಹಲೆವೆಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ದೂರದ ಊರಿನಿಂದ ಸಿದ್ದಗಂಗಾ ಮಠಕ್ಕೆ ಹೋಗುವ ಜನರಿಗಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ರಾತ್ರಿ ವೇಳೆಯೇ 1 ಲಕ್ಷಕ್ಕೂ ಹೆಚ್ಚು ಭಕ್ತರು ಅಂತಿಮ ದರ್ಶನ ಪಡೆದಿದ್ದಾರೆ. ಸರದಿ ಸಾಲಿನಲ್ಲಿ ಬಂದು ಭಕ್ತರು ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ.

ನಟಿ ಸುಮಲತ, ಮಗ ಅಭಿಷೇಕ್ ಗೌಡ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ, ದೊಡ್ಡಣ್ಣ ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ. ಸಾಗರೋಪಾದಿಯಲ್ಲಿ ಬರುತ್ತಿರುವ ಭಕ್ತಾದಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply