KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಸಭೆಗೆ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಂಜಲಿ ನಿಂಬಾಳ್ಕರ್ ಗೈರಾಗಿದ್ದಾರೆ.

ನಗರದ ಸಂಕಂ ಹೋಟೆಲ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ್, ವೀರಕುಮಾರ್ ಪಾಟೀಲ್ ಹಾಜರಾಗಿದ್ದು, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಹಾಗೂ ಮಹಾಂತೇಶ ಕೌಜಲಗಿ ಗೈರಾಗಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್‌ ಹೇಳಿದ್ದೇ ಅಂತಿಮ: ಪರಿಷತ್‌ ಟಿಕೆಟ್‌ ಬಗ್ಗೆ ಡಿಕೆಶಿ ಮಾತು

ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಶುರುವಾಗಿರುವ ಅನುಮಾನ ಮೂಡುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಮೇ 25ಕ್ಕೆ ನಾಮಪತ್ರ ಸಲ್ಲಿಕೆಗೆ ನಿರ್ಧರಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನಿಲ್ ಸಂಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

ಇನ್ನು ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಇಂದಿನ ಸಭೆಯಲ್ಲಿ ಮತದಾರರನ್ನು ಸೆಳೆಯಲು ಏನೆಲ್ಲಾ ರೂಪು ರೇಷೆಗಳನ್ನು ಸಿದ್ಧಪಡಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು.

Comments

Leave a Reply

Your email address will not be published. Required fields are marked *