ಎಡಕುಮಾರಿ ಬಳಿ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್‌

ಹಾಸನ: ಪಶ್ಚಿಮಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರು-ಮಂಗಳೂರು (Bengaluru-Mangaluru) ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ.

ಬಾರಿ ಮಳೆಗೆ ಸಕಲೇಶಪುರ (Sakleshpur) ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಹೀಗಾಗಿ ರೈಲು, ಗೂಡ್ಸ್ ರೈಲುಗಳ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

 

ಏಳು ಕಿಲೋಮೀಟರ್ ವ್ಯಾಪ್ತಿಯ 15 ಕಡೆಗಳಲ್ಲಿ ಭೂಕುಸಿತವಾಗಿದ್ದು ರೈಲ್ವೆ ಹಳಿ ಮೇಲೆ ಬಾರಿ ಪ್ರಮಾಣದ ನೀರು ಹರಿಯುತ್ತಿದ್ದು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಲ್ಲಾ ರೈಲುಗಳ ಸಂಚಾರವನ್ನು ಬಂದ್ ಮಾಡಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ರಕ್ಷಣಾ ಸಿಬ್ಬಂದಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಶ್ರೀವಾಗಿಲು-ಯಡಕುಮಾರಿ, ಯಡಕುಮಾರಿ-ಕಡಗರವಳ್ಳಿ ಮತ್ತು ಕಡಗರವಳ್ಳಿ-ಡೋಣಿಗಲ್ ವಿಭಾಗಗಳ ನಡುವೆ ಭೂಕುಸಿತದಿಂದ ಉಂಟಾದ ಭಾರೀ ಮಳೆಯಿಂದಾಗಿ, ರೈಲು ಮಾರ್ಗ ಬದಲಾವಣೆ ಮಾಡಲಾಗಿದೆ.