ಬಾಲಕೃಷ್ಣ ಮೊದಲು ತಮ್ಮ ಅನುದಾನ ಪಡೆಯಲಿ: ಬೊಮ್ಮಾಯಿ

– ಇದು ಝೀರೊ ಅನುದಾನ ಸರ್ಕಾರ

ಚಿಕ್ಕಬಳ್ಳಾಪುರ: ಇದು ಝೀರೊ ಅನುದಾನ ಸರ್ಕಾರವಾಗಿದ್ದು, ಯಾರಿಗೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ನಾವು ಅನುದಾನ (Grant) ಹಂಚಿಕೆಯಲ್ಲಿ ಯಾರಿಗೂ ತಾರತಮ್ಯ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ವಿರೋಧ ಪಕ್ಷದ ಶಾಸಕರಿಗೆ ಅನುದಾನ ನೀಡಿದ್ದೇವೆ. ಎಲ್ಲರಿಗೂ ಸಮಾನವಾಗಿ ನೀಡಿದ್ದೆವು ಎಂದರು.

ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ (HC Balakrishna) ಅವರು ಆಡಳಿತ ಪಕ್ಷದ ಶಾಸಕರಿಗೆ ಮಾತ್ರ ಅನುದಾನ ನೀಡುವುದಾಗಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಾಲಕೃಷ್ಣ ಅವರು ಸರ್ಕಾರ ಅಲ್ಲ. ಅವರು ಮೊದಲು ತಮ್ಮ ಅನುದಾನ ಪಡೆಯಲಿ. ಮಾಗಡಿಯಲ್ಲಿ ಹಿಂದೆ ನಮ್ಮ ಶಾಸಕರು ಇರಲಿಲ್ಲ ಆದರೂ ನಾವು ಅನುದಾನ ನೀಡಿದ್ದೆವು. ಬಾಲಕೃಷ್ಣ ಅವರು ಮೊದಲು ತಮಗೆ ಅನುದಾನ ಪಡೆಯಲಿ. ನಾವು ನಮ್ಮ ಅನುದಾನ ಪಡೆದುಕೊಳ್ಳುತ್ತೇವೆ. ಈ ಸರ್ಕಾರದಲ್ಲಿ ಯಾರಿಗೂ ಅನುದಾನ ಇಲ್ಲ. ಇದು ಝೀರೊ ಅನುದಾನ ಸರ್ಕಾರ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ

ಇನ್ನು ಇದೊಂದು ರೈತ ವಿರೋಧಿ ಸರ್ಕಾರವಾಗಿದ್ದು, ನಮ್ಮ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡದೆ ಬಂದ್ ಆಗಿವೆ. ಕಿಸಾನ್ ಸಮ್ಮಾನ್ ಹಣ ನೀಡಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ವಿದ್ಯಾನಿಧಿ, ರೈತ ಶಕ್ತಿ ಯೋಜನೆ ನೀಡಿದ್ದೇವೆ. ಅವೆಲ್ಲವನ್ನೂ ನಿಲ್ಲಿಸಿದ್ದಾರೆ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಮನವೊಲಿಕೆ – ಉಪವಾಸ ಸತ್ಯಾಗ್ರಹ ವಾಪಸ್‌ ಪಡೆದ ಶಾಸಕ ಮುನಿರತ್ನ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]