ಪ್ರವಾಸಕ್ಕೆ ಬಂದು ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿ ರಕ್ಷಣೆ ಮಾಡಿದ ಲೈಫ್ ಗಾರ್ಡ್ ಸಿಬ್ಬಂದಿ – ವಿಡಿಯೋ ನೋಡಿ

ಕಾರವಾರ: ಪ್ರವಾಸಕ್ಕೆ ಬಂದಿದ್ದ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್ ನಲ್ಲಿ ನಡೆದಿದೆ.

ಶಿವಮೊಗ್ಗದ ರಾಘವೇಂದ್ರ ಪ್ಯಾರಾ ಮೆಡಿಕಲ್ ಕಾಲೇಜಿನ ಗಗನ್ (18) ರಕ್ಷಿಸಲ್ಪಟ್ಟ ವಿದ್ಯಾರ್ಥಿ. ಕಾಲೇಜಿನ ಪ್ರವಾಸಕ್ಕೆಂದು ಸುಮಾರು 15 ಜನ ವಿದ್ಯಾರ್ಥಿಗಳು ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಬಂದಿದ್ದರು. ಇಂದು ಮುರಡೇಶ್ವರ ಕಡಲ ತೀರದಲ್ಲಿ ಈಜುವಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಗಗನ್ ಕೊಚ್ಚಿ ಹೋಗಿದ್ದಾನೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಲೈಫ್ ಗಾರ್ಡ ಸಿಬ್ಬಂದಿಗಳಾದ ರೋಹಿತ ಹರಿಕಾಂತ, ಶಶಿಧರ, ಮತ್ತು ಬೋಟ್ ಸಿಬ್ಬಂದಿಗಳು ಯುವಕ ಕೊಚ್ವಿ ಹೋಗಿದ್ದನ್ನು ಗಮನಿಸಿದ್ದಾರೆ. ತಕ್ಷಣ ಬೋಟ್ ತೆಗೆದುಕೊಂಡು ಹೋಗಿ ಗಗನ್‍ನನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದು ಪ್ರವಾಸೋದ್ಯಮ ಅಧಿಕಾರಿಗಳಾದ ರವಿ ವಾಲೇಕರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ನಂತರ ಮುರುಡೇಶ್ವರ ಪೊಲೀಸ್ ಠಾಣೆಗೆ ಹೋಗಿ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಯುವಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.

https://youtu.be/49iPtd2iSZE

Comments

Leave a Reply

Your email address will not be published. Required fields are marked *