ಡಜನ್ ಆಕಾಂಕ್ಷಿಗಳಲ್ಲಿ ಟಿಕೆಟ್ ಯಾರಿಗೆ – ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್

bjP

ಬೆಂಗಳೂರು: ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಬಹುತೇಕ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಈ ಸಂಬಂಧ ನವದೆಹಲಿಯಲ್ಲಿ ಗುರವಾರ ಬಿಜೆಪಿ ವರಿಷ್ಠರ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ.

ಕರ್ನಾಟಕದ 4 ಸ್ಥಾನಗಳ ಪೈಕಿ 2 ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದು, ಕಣಕ್ಕಿಳಿಯುವ ಇಬ್ಬರು ಅಭ್ಯರ್ಥಿಗಳ ಆಯ್ಕೆ ನಡೆಯಬೇಕಿದೆ. ಹಾಲಿ ಸದಸ್ಯೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಡಜನ್ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ವರಿಷ್ಠರಿಗೆ ರವಾನಿಸಿದೆ. ಇದನ್ನೂ ಓದಿ: ಯಡಿಯೂರಪ್ಪಗೆ ಕೊಟ್ಟು ಗೊತ್ತೇ ಹೊರತು ಬೇಡಿ ಪಡೆದು ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ

lehar singh

ಮತ್ತೋರ್ವ ಹಾಲಿ ಸದಸ್ಯ ಕೆ.ಸಿ.ರಾಮಮೂರ್ತಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಸುರಾನಾ, ಮಾಜಿ ಶಾಸಕ ಲೆಹರ್‌ಸಿಂಗ್, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ಉದ್ಯಮಿ ಪ್ರಕಾಶ್ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಆಕಾಂಕ್ಷಿತರ ಪಟ್ಟಿಯಲ್ಲಿದ್ದಾರೆ. ಇದನ್ನೂ ಓದಿ: 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತಾಗಿಯೂ ರಾಷ್ಟ್ರೀಯ ನಾಯಕರು ಸಮಾಲೋಚನೆ ನಡೆಸಲಿದ್ದಾರೆ. 3ನೇ ಅಭ್ಯರ್ಥಿಯ ಆಯ್ಕೆಗೆ 15 ಶಾಸಕರ ಕೊರತೆಯಿದ್ದು, ಅದು ಕೈಗೂಡುವುದಾದರೆ ಮಾತ್ರ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಇಲ್ಲದಿದ್ದರೆ ಪ್ರತಿಪಕ್ಷಗಳ ಹೆಚ್ಚುವರಿ ಮತ ಕೀಳಬಲ್ಲ ತಟಸ್ಥ ಅಭ್ಯರ್ಥಿಯೊಬ್ಬರನ್ನು ಮುಂದೆ ಬಿಟ್ಟು ಗೆಲ್ಲಿಸುವ ತಂತ್ರಗಾರಿಯೂ ಬಿಜೆಪಿಯದ್ದಾಗಿದೆ.

nirmala sithraman

ಈ ನಡುವೆ ವಿಧಾನಪರಿಷತ್ ಟಿಕೆಟ್ ವಂಚಿತರಿಗೆ ಅವಕಾಶ ನೀಡುವುದೋ ಅಥವಾ ಪಕ್ಷ ನಿಷ್ಠ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೋ ಎನ್ನುವ ಬಗ್ಗೆ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಪರಿಷತ್ ಅಭ್ಯರ್ಥಿಗಳ ಆಯ್ಕೆಯಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕೈ ಮೇಲಾಗಿದ್ದು, ಇದರಲ್ಲೂ ಅವರದ್ದೇ ಮಾತು ನಡೆಯುತ್ತಾ ಅನ್ನೋದು ನೋಡಬೇಕಿದೆ.

ಈಗಾಗಲೇ ಮಗನಿಗೆ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಸಮಾಧಾನ ಮಾಡುವ ಪ್ರಯತ್ನ ಏನಾದ್ರೂ ಆಗುತ್ತಾ ಅನ್ನುವುದನ್ನು ಕಾದು ನೋಡಬೇಕು. ಜೂನ್ 10 ರಂದು ನಡೆಯುವ ಚುನಾವಣೆಗೆ ನಿನ್ನೆಯೇ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಸಲು ಮೇ 31 ಕೊನೆಯ ದಿನ. ಸೋಮವಾರದೊಳಗೆ ಬಿಜೆಪಿ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಬೇಕಿದೆ.

Comments

Leave a Reply

Your email address will not be published. Required fields are marked *