ಆಹಾರ, ಔಷಧಿ, ಅಗತ್ಯ ವಸ್ತುಗಳು ದೇಶದಲ್ಲಿ ಸಾಕಷ್ಟಿವೆ, ಹೆದರುವ ಅಗತ್ಯವಿಲ್ಲ: ಅಮಿತ್ ಶಾ

ನವದೆಹಲಿ: ಆಹಾರ, ಔಷಧಿ ಸೇರಿದಂತೆ ಇತರೆ ಅಗತ್ಯ ವಸ್ತುಗಳು ದೇಶದಲ್ಲಿ ಸಾಕಷ್ಟಿದ್ದು, ಯಾರು ಹೆದರುವ ಅಗತ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರ ವರೆಗೆ ದೇಶಾದ್ಯಂತ ಲಾಕ್‍ಡೌನ್ ವಿಸ್ತರಣೆ ಮಾಡಿದ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿ ಜನ ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಗೃಹ ಸಚಿವನಾಗಿ ಔಷಧಿ, ಆಹಾರ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳು ದೇಶದಲ್ಲಿ ಬೇಕಾದಷ್ಟಿದೆ ಎಂದು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತಿದ್ದೇನೆ. ಯಾರೂ ಈ ಬಗ್ಗೆ ಚಿಂತಿಸಬೇಕಿಲ್ಲ. ಶ್ರೀಮಂತರು ಬಡವರಿಗೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರದ ಜೊತೆ ರಾಜ್ಯಗಳು ಕೈ ಜೋಡಿಸಿದ್ದು ಸಹಕಾರ ನೀಡುತ್ತಿವೆ. ಘೋಷಣೆಯಾಗಿರುವ ಲಾಕ್‍ಡೌನ್ ಪಾಲಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ವೈದ್ಯರು, ವೈದ್ಯಕೀಯ ಸಿಬ್ಬಂದಿ, ಸ್ಯಾನಿಟೈಸೇಷನ್ ಸಿಬ್ಬಂದಿ, ಪೊಲೀಸರು ಹಾಗೂ ಎಲ್ಲಾ ಭದ್ರತಾ ಸಿಬ್ಬಂದಿಗಳು ಕೊಡುಗೆ ಮಹತ್ತರವಾದದ್ದು. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಅವರ ಕೆಲಸ ನಮಗೆಲ್ಲ ಪ್ರೇರಣೆಯಾಗಬೇಕು. ಎಲ್ಲರೂ ನಿಯಮವನ್ನು ಪಾಲಿಸಿ ಇವರ ಕೆಲಸಕ್ಕೆ ಸಹಕರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

Comments

Leave a Reply

Your email address will not be published. Required fields are marked *