ಕಲಬುರಗಿ: ಜನವಸತಿ ಪ್ರದೇಶದಲ್ಲಿಯೇ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮಲ್ಲಿಕಾರ್ಜುನ್ ವಿಠಲ್(29) ಕೊಲೆಯಾದ ವ್ಯಕ್ತಿ. ವಿಠಲ್ ಕಲಬುರಗಿಯ ಮೇಳಕುಂದಾ ಗ್ರಾಮದ ನಿವಾಸಿಯಾಗಿದ್ದು, ಲಾಡ್ಜ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬೆಳ್ಳಂಬೆಳಗ್ಗೆ ನೂರಾರು ಜನರ ಮಧ್ಯದಲ್ಲಿಯೇ ನಡು ರಸ್ತೆಯಲ್ಲಿ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಪಲ್ಸರ್ ಬೈಕ್‍ನಲ್ಲಿ ಬಂದು ಏಕಾಏಕಿ ವಿಠಲ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಪರಿಣಾಮ ವಿಠಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತಂಡವನ್ನು ರಚಿಸಿದ್ದಾರೆ.
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply