ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕನಸು ಕಾಣುತ್ತಿರುವ ಬಿಜೆಪಿಗೆ ಈಗ ಇರುವ 6 ಕ್ಷೇತ್ರಗಳಲ್ಲಿ ಸೋಲುವ ಭೀತಿ ಕಾಣಿಸಿಕೊಂಡಿದೆ.
ಜೆಡಿಎಸ್ ಮತ್ತು ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೆ ಬಿಜೆಪಿಗೆ ಕಷ್ಟವಾಗಲಿದೆ. ಒಂದು ವೇಳೆ ಇಳಿಸಿದರೆ ಮೈಸೂರು, ಬೆಳಗಾವಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಉತ್ತರಕನ್ನಡ ಕ್ಷೇತ್ರಗಳಲ್ಲಿ ಸೋಲುವ ಭೀತಿ ಇದೆ ಎಂದು ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅಮಿತ್ ಶಾ ಅವರಿಗೆ ಮೌಖಿಕ ವರದಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಎಸ್‍ವೈ ವರದಿಗೆ ಗರಂ ಆದ ಅಮಿತ್ ಶಾ ಅಧಿಕೃತ ವರದಿ ನೀಡುವಂತೆ ಸೂಚಿಸಿದ್ದಾರೆ. ಇಂದಿನಿಂದ ದೆಹಲಿಯಲ್ಲಿ ಆರಂಭವಾಗಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ವಿಚಾರದ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ. ಭಾನುವಾರ ರಾಜ್ಯ ಬಿಜೆಪಿ ಘಟಕದೊಂದಿಗೆ ಅಮಿತ್ ಶಾ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆಯಿದ್ದು, ಸೋಲುವ ಭೀತಿ ಹೆಚ್ಚಾಗಿರುವ ಕಡೆ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
2014ರ ಚುನಾವಣೆಯಲ್ಲಿ ಮೈಸೂರಿನಿಂದ ಪ್ರತಾಪ್ ಸಿಂಹ, ಉತ್ತರ ಕನ್ನಡದಿಂದ ಅನಂತ್ ಕುಮಾರ್ ಹೆಗ್ಡೆ, ಕೊಪ್ಪಳದಿಂದ ಕರಡಿ ಸಂಗಣ್ಣ, ಬೆಳಗಾವಿಯಿಂದ ಸುರೇಶ್ ಅಂಗಡಿ, ವಿಜಯಪುರದಿಂದ ರಮೇಶ್ ಜಿಗಜಿಣಗಿ, ಬಾಗಲಕೋಟೆಯಿಂದ ಗದ್ದಿಗೌಡರ್ ಗೆದ್ದಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply