ತಾಯಿ ಬದಲು ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಗ ಅರೆಸ್ಟ್‌ – ʻಲೋಕಾʼ ದಾಳಿ ವೇಳೆ ಬಿಬಿಎಂಪಿ ಕಳ್ಳಾಟ ಬಯಲು

ಬೆಂಗಳೂರು: ಬಿಬಿಎಂಪಿ ಕಚೇರಿ (BBMP Office) ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿದ ವೇಳೆ ಹಲವು ಅಕ್ರಮಗಳು ಬಹಿರಂಗಗೊಂಡಿವೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ಶುಕ್ರವಾರ ಬಿಬಿಎಂಪಿಯ 54 ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ (ARO) ಕಚೇರಿ ಮೇಲೆ ದಾಳಿ ನಡೆಸಿದಾಗ ತಾಯಿ ಬದಲಾಗಿ ಕಚೇರಿ ಲಾಗಿನ್‌ ಐಡಿ ಪಡೆದು ಮಗ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಸಿದ್ಧಾಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಚೇರಿಯಲ್ಲಿ ಅನಧಿಕೃತವಾಗಿ ಕೆಲಸ ಮಾಡುತ್ತಿದ್ದ ನವೀನ್‌ ಎಂಬಾತನನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಕಾಟನ್ ಕ್ಯಾಂಡಿ V/S ವೈ ಬುಲ್ ರ‍್ಯಾಪರ್‌ ವಾರ್ – ಚಂದನ್ ಶೆಟ್ಟಿ ಮೇಲೆ ಟ್ಯೂನ್ ಕದ್ದ ಆರೋಪ

ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ (ARO) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿರುವ ಕವಿತಾ, ತನ್ನ ಬದಲಿಗೆ ಕಚೇರಿ ಲಾಗಿನ್‌ ಐಡಿ ಯನ್ನ ಮಗ ನವೀನ್‌ಗೆ ನೀಡಿ ಕೆಲಸಕ್ಕೆ ಕಳಿಸಿದ್ದಾರೆ. ದಾಳಿ ನಡೆಸಿದ ವೇಳೆ ವಿಚಾರಿಸಿದಾಗ, ಸಾರ್ವಜನಿಕರಿಗೆ ಆಗುವ ಅನಾನುಕೂಲತೆ ತಪ್ಪಿಸಲು ನಾನು ನನ್ನ ತಾಯಿಯ ಪರವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ನವೀನ್‌ ಖುದ್ದು ಒಪ್ಪಿಕೊಂಡಿದ್ದಾನೆ ಎಂದು ನ್ಯಾ. ಬಿ. ವೀರಪ್ಪ ಅವರು ಹೇಳಿದ್ದಾರೆ. ಇದನ್ನೂ ಓದಿ:  Kolar | ಪರಿಚಯಸ್ಥರ ಸೋಗಿನಲ್ಲಿ ಬಂದು ಒಂಟಿ ಮನೆ ದೋಚಿದ ನಾಲ್ವರು ದುಷ್ಕರ್ಮಿಗಳು

ಅಲ್ಲದೇ ಕವಿತಾ ಅವರು ಸಹಾಯಕರನ್ನಾಗಿ ಗೀತಾ ಎಂಬುವವರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ. ಹಾಗಾಗಿ ಅಧಿಕಾರ ದುರುಪಯೋಗ ಆರೋಪದ ಮೇಲೆ ಕಚೇರಿ ಮುಖ್ಯಸ್ಥರಾದ ಸುಜಾತ, ಕೇಸ್ ವರ್ಕರ್ ಕವಿತಾ, ಮಗ ನವೀನ್ ವಿರುದ್ಧ ಸಿದ್ಧಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.