ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ – ರಾಜ್ಯದ 90 ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಭ್ರಷ್ಟರನ್ನು ಬೇಟೆಯಾಡುವ ಸಲುವಾಗಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ರಾಜ್ಯದ 90 ಕಡೆ ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿದೆ.

17 ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಒಟ್ಟು 17 ಅಧಿಕಾರಿಗಳಿಗೆ ಸಂಬಂಧಿಸಿದಂತೆ ಒಟ್ಟು 75 ಕಡೆ ದಾಳಿ ಮಾಡಲಾಗಿದೆ. ಒಟ್ಟು 250 ಅಧಿಕಾರಿಗಳು ತಂಡದಿಂದ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಬೆಂಗಳೂರಿನ ಕೆಆರ್‌ಪುರದಲ್ಲಿ ಆರ್‌ಟಿಓ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು (Officers) ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಯ ಮನೆ, ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮೂರು ಕಡೆಗಳಲ್ಲೂ ಪರಿಶೀಲನೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಆಂಧ್ರದಲ್ಲಿ ರೈಲು ದುರಂತ – 12 ರೈಲುಗಳ ಸಂಚಾರ ರದ್ದು

ಚಂದ್ರಪ್ಪ ಪಾಲಿಕೆ ಎಆರ್‌ಓ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಪ್ಪಗೆ ಸೇರಿದ ಮೂರು ಸ್ಥಳಗಳ ದಾಳಿ ನಡೆಸಲಾಗಿದೆ. ಇಬ್ಬರು ಎಸ್‌ಪಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದು, ವಂಶಿ ಕೃಷ್ಣ, ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇದನ್ನೂ ಓದಿ: ನಾಗರ ಹಾವು ಓಡಿಸಲು ಹೊಗೆ ಹಾಕಿದ ಕುಟುಂಬ- ಇಡೀ ಮನೆ ಭಸ್ಮ

ಆರ್‌ಆರ್ ನಗರ ವಲಯ ಹೆಗ್ಗನಹಳ್ಳಿ ವಾರ್ಡ್ ಎಆರ್‌ಓ ಚಂದ್ರಪ್ಪ 30ನೇ ತಾರೀಕಿನಂದು ಲಂಚ (Bribe) ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಈ ಹಿನ್ನೆಲೆ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಇನ್ನು ಕಾರ್ಮಿಕ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಶ್ರೀನಿವಾಸ್ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಕೊಳ್ಳೆಗಾಲ ಮನೆ ಮೇಲೆ ದಾಳಿ ನಡೆಸಿದ್ದು,ಲೋಕಾಯುಕ್ತ ಅಧಿಕಾರಿಗಳಿಂದ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದೆ. ಶ್ರೀನಿವಾಸ್‌ಗೆ ಸಂಬಂಧಿಸಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಬದಲಾಗುತ್ತಾ ನಮ್ಮ ಮೆಟ್ರೋ ಹೆಸರು?

ದಾಳಿ ವೇಳೆ ಶ್ರೀನಿವಾಸ್ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆಯಾಗಿದೆ. ಶ್ರೀನಿವಾಸ್‌ಗೆ ಸೇರಿ ಉಪ್ಕಾರ್ ರೆಸಿಡೆನ್ಸಿ ಉಲ್ಲಾಳ್ ಮನೆಯಲ್ಲಿ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು, ಶ್ರಿನಿವಾಸ್ ಮನೆ ಸೇರಿದಂತೆ ನಗರದ 9 ಕಡೆ ದಾಳಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಅದೇ ರೀತಿ ರಾಜ್ಯದ ಅನೇಕ ಜಿಲ್ಲೆಗಳಲ್ಲೂ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]