ಧ್ವನಿವರ್ಧಕಗಳ ವಿಚಾರದಲ್ಲಿ ತಾಳ್ಮೆಯನ್ನು ಪರೀಕ್ಷಿಸಬೇಡಿ: ರಾಜ್ ಠಾಕ್ರೆ

Raj Thackeray

ಮುಂಬೈ: ಮಸೀದಿ ಧ್ವನಿವರ್ಧಕಗಳ ವಿಚಾರದಲ್ಲಿ ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎಂಎನ್‍ಎಸ್ ಅಧ್ಯಕ್ಷ ಎಚ್ಚರಿಕೆ ನೀಡಿದರು.

ಈ ಬಗ್ಗೆ ಮಾತನಾಡಿದ ಅವರು, 28,000 ಎಂಎನ್‍ಎಸ್ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ. ಹಾಗೂ ಸಾವಿರಾರು ಜನರನ್ನು ಹೊರಹಾಕಲಾಗಿದೆ. ಈ ಎಲ್ಲಾ ಪೊಲೀಸರ ಕ್ರಮವು ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಕೇಳಿದ್ದಕ್ಕಾಗಿ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ನಾಯಕರನ್ನು ಪಾಕಿಸ್ತಾನಿ ಭಯೋತ್ಪಾದಕರು ಅಥವಾ ಹಿಂದಿನ ನಿಜಾಮ್ ಆಳ್ವಿಕೆಯಲ್ಲಿದ್ದ ರಜಾಕರು ಎಂಬಂತೆ ಪೊಲೀಸರು ಹುಡುಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

loudspeakers

ಈ ರೀತಿಯ ಕೈಚಳಕವನ್ನು ಪೊಲೀಸರು ಮಸೀದಿಗಳಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಬಳಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರದ ನಿಲುವನ್ನು ಮಾರಾಠಿಗರು ಮತ್ತು ಹಿಂದೂಗಳು ಗಮನಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಧ್ವನಿವರ್ಧಕ ಬಳಕೆಗೆ ನಿಯಮ ಜಾರಿ – ಮಾರ್ಗಸೂಚಿಯಲ್ಲಿ ಏನಿದೆ?

Comments

Leave a Reply

Your email address will not be published. Required fields are marked *