ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

ದಾವಣಗೆರೆ: ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿಕೇರಿ ಗ್ರಾಮದಲ್ಲಿ ನಡೆದಿದೆ.

ಕಂಚಿಕೇರಿ ಗ್ರಾಮದ 10ನೇ ತರಗತಿಯ ಕಾವೇರಿ ಹಾಗೂ ಶಶಿ(22) ಆತ್ಮಹತ್ಯೆ ಶರಣಾದ ಪ್ರೇಮಿಗಳು. ಗ್ರಾಮದ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಕಾವೇರಿ ಹಾಗೂ ಆಕೆಯ ಸೋದರ ಮಾವ ಶಶಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ  ಗುರುವಾರವೇ ಇಬ್ಬರು ಮನೆ ಬಿಟ್ಟು ಹೋಗಿದ್ದರು. ಆದರೆ ಶನಿವಾರ ಏಕಾಏಕಿ ಗ್ರಾಮದ ಬಳಿ ಇಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರ ಮದುವೆಗೆ ಪೋಷಕರು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಮನೆ ಬಿಟ್ಟು ತೆರಳಿದ್ದರು ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *