ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

– ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ವಾಯಭಾರ ಕುಸಿತ ಹಿನ್ನೆಲೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಜೂನ್ 15ರವರೆಗೆ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ

ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?
ಜೂ.12: ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

ಜೂ.13: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

ಜೂ.14: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ