LPG Price Hike: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 25 ರೂ. ಹೆಚ್ಚಳ

LPG

ನವದೆಹಲಿ: ಇಂದಿನಿಂದಲೇ (ಮಾ.1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು (OMCs) ಶುಕ್ರವಾರ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ.

ಈಗಿನ ಬೆಲೆಗಳ ಏರಿಕೆಯ ನಂತರ, ದೆಹಲಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ 1,795 ರೂ.ಗೆ ಲಭ್ಯವಾಗಲಿದೆ. ಬೆಲೆ ಏರಿಕೆಯು ಕೋಲ್ಕತ್ತಾ, ಮುಂಬೈ, ಚೆನ್ನೈ ಮತ್ತು ಇತರ ಮಹಾನಗರಗಳ ಜನರ ಮೇಲೂ ಪರಿಣಾಮ ಬೀರಿದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೋಲ್ಕತ್ತಾದಲ್ಲಿ 1,911 ರೂ., ಮುಂಬೈನಲ್ಲಿ 1,749 ರೂ. ಮತ್ತು ಚೆನ್ನೈನಲ್ಲಿ 1,960.50 ರೂ.ಗೆ ಲಭ್ಯವಾಗಲಿದೆ.