ಹಿಂದೂ ಮಹಾಸಾಗರದಲ್ಲಿ ಮುಳುಗಿದ ವಲಸಿಗರ ದೋಣಿ – 34 ಮಂದಿ ಸಾವು

ಮಡಗಾಸ್ಕರ್: ವಲಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಹಿಂದೂ ಮಹಾಸಾಗರದಲ್ಲಿ ಮುಳುಗಿ 34 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. ಈ ದೋಣಿ ಮಯೊಟ್ಟೆ ದ್ವೀಪದ ಕಡೆಗೆ ಸಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೋಣಿಯಲ್ಲಿ ಒಟ್ಟು 58 ಮಂದಿ ವಲಸಿಗರು ಪ್ರಯಾಣಿಸುತ್ತಿದ್ದರು. ದೋಣಿ ರಹಸ್ಯವಾಗಿ ತೆರಳುತ್ತಿತ್ತು. ಮಡಗಾಸ್ಕರ್‌ನ ವಾಯುವ್ಯ ಕರಾವಳಿಯಲ್ಲಿ ಶನಿವಾರ ರಾತ್ರಿ ದೋಣಿ ಮುಳುಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವಘಡಕ್ಕೆ ಸಿಲುಕಿ ಮುಳುಗುತ್ತಿದ್ದ 24 ಮಂದಿಯನ್ನು ರಕ್ಷಿಸಲಾಗಿದೆ. ಮೂವರು ಮಕ್ಕಳು ಸೇರಿ 34 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ರಕ್ಷಿಸಲ್ಪಟ್ಟವರಲ್ಲಿ ಒಬ್ಬ ಗರ್ಭಿಣಿ ಹೊರತು ಉಳಿದವರು ದಡಕ್ಕೆ ಬಂದೊಡನೆ ಎಸ್ಕೇಪ್‌ ಆಗಿದ್ದಾರೆ. ವಲಸಿಗರನ್ನು ಅಕ್ರಮವಾಗಿ ಸಾಗಿಸುತ್ತಿರುವ ಇಬ್ಬರು ಶಂಕಿತ ಕಳ್ಳಸಾಗಣೆದಾರರನ್ನು ಬಂಧಿಸಲು ಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *