ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸಿಎಂ ಹಾಗೂ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆ ಶಿವಪುರ ನಿವಾಸಿ ಜ್ಯೋತಿ ಅವರ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದ್ದೂರು‌ ಠಾಣೆಯ ಇನ್‌ಸ್ಪೆಕ್ಟರ್‌ ಶಿವಕುಮಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ವಿಚಾರವಾಗಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪರಸ್ಪರ ಕೋಮುಗಳ ನಡುವೆ ವೈಮನಸ್ಸು, ವೈರತ್ವಕ್ಕೆ ಉತ್ತೇಜನ ನೀಡುವ ಆರೋಪದಲ್ಲಿ ಎಫ್‌ಐಆರ್‌ ಆಗಿದೆ.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿತ್ತು. ಈ ಘಟನೆ ಉದ್ವಿಗ್ನತೆಗೆ ಕಾರಣವಾಗಿತ್ತು. ಮಾರನೇ ದಿನ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದರು. ಆಗ ಮಹಿಳೆ ಜ್ಯೋತಿ ಕೂಡ ಲಾಠಿ ಏಟು ತಿಂದಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.