ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ FIR ದಾಖಲು

ಭೋಪಾಲ್: ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ದುರುಪಯೋಗವಾಗಿದೆ ಎಂದು ಆರೋಪಿಸಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರ ವಿರುದ್ಧ ಎಫ್‍ಐಆರ್ ದಾಖಲಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಬುಡಕಟ್ಟು ಜನರ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರು ರಾಜಕೀಯ ಹಾಗೂ ದೇಶ ವಿರೋಧಿ ಕಾರ್ಯಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್‍ಎನ್‍ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ನಡೆಸಲು ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಫ್‍ಐಆರ್‌ನಲ್ಲಿ ತಿಳಿಸಿಲಾಗಿದೆ. ಇದನ್ನೂ ಓದಿ: ಪೌರ ಕಾರ್ಮಿಕರು ರಜೆ ಹಾಕಿದ್ರೆ ಸಂಬಳವೇ ಕಟ್- ರೆಸ್ಟ್‌ಲೆಸ್ ವರ್ಕರ್ಸ್‍ಗೆ ಇದೆಂಥಾ ಅನ್ಯಾಯ..?

ಖಾಸಗಿ ದೂರಿನ ಮೇರೆಗೆ ಮೇಧಾ ಪಾಟ್ಕರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ದೂರುದಾರರು ಕೆಲವು ದಾಖಲೆಗಳನ್ನು ಒದಗಿಸಿದ್ದಾರೆ. ಹಳೆಯ ವಹಿವಾಟಿಗೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಬರ್ವಾನಿ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಪುನಾರಂಭ

ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಈ ಬಗ್ಗೆ ಮಾತನಾಡಿ, ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಈ ಆರೋಪಗಳ ಹಿಂದೆ ರಾಜಕೀಯವಿದೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *