ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗೋದು: ಮಹಾಂತೇಶ್ ಕವಟಗಿಮಠ

ಹುಬ್ಬಳ್ಳಿ: ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗುವುದು ಎಂದು ಪರಿಷತ್ ಸದಸ್ಯ ಹಾಗೂ ಪರಾಜಿತ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ತಿಳಿಸಿದರು.

ಹುಬ್ಬಳ್ಳಿಯಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕರಿಣಿ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನ ಸೋಲಿನ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾಹಿತಿ ನೀಡುವೆ ಎಂದು ತಿಳಿಸಿದರು.

ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಮತ್ತು ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗುವುದು ಎಂದು ವಿಶ್ವಾಸದ ಮಾತುಗಳನ್ನು ಆಡಿದರು. ಇದನ್ನೂ ಓದಿ:  ವಚನಗಳಲ್ಲಿ ‘ಲಿಂಗದೇವ’ ಬದಲಾಗಿ ‘ಕೂಡಲಸಂಗಮದೇವ’ ವಚನಾಂಕಿತ ಬಳಸಲು ನಿರ್ಧಾರ: ಗಂಗಾದೇವಿ

ಸಂಘಟನಾತ್ಮಕವಾಗಿ ಅತ್ಯಂತ ಗಟ್ಟಿಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಸೋಲು ಕಂಡಿದ್ದು, ಬೇಸರ ಮೂಡಿಸಿದೆ. ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ವೇದಿಕೆಯಲ್ಲಿ ಪರಾಮರ್ಶೆ ಮಾಡಲಾಗುವುದು. ಚುನಾವಣೆಯ ಸಂಪೂರ್ಣ ವಿವರವನ್ನು ರಾಜ್ಯ ಬಿಜೆಪಿ ಉಸ್ತುವಾರಿಗೆ ತಿಳಿಸಲಾಗುವುದು ಎಂದು ತಿಳಿಸಿದರು.

ಆಂತರಿಕವಾಗಿ ಯಾರ ಕಡೆಯಿಂದ ತಪ್ಪಾಗಿದೆ ಎನ್ನುವುದರ ಬಗ್ಗೆ ಇಲ್ಲಿನ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *