ಪ್ರಿನ್ಸ್ ಮಹೇಶ್ ಬಾಬುಗೆ ಕೊರೊನಾ ಪಾಸಿಟಿವ್

ಚೆನ್ನೈ: ದಕ್ಷಿಣ ಭಾರತದ ಪ್ರಿನ್ಸ್ ಮಹೇಶ್ ಬಾಬು ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಕುರಿತು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ನಾನು ಈ ಮೂಲಕ ಒಂದು ವಿಷಯ ತಿಳಿಸುತ್ತಿದ್ದೇನೆ. ನಾನು ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಮನೆಯಲ್ಲಿ ನಾನು ಪ್ರತ್ಯೇಕವಾಗಿದ್ದೇನೆ. ವೈದ್ಯಕೀಯ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಪರೀಕ್ಷೆಗೆ ಒಳಪಡಿಸಿಕೊಳ್ಳಿ ಎಂದು ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಲೆಜೆಂಡರಿ ಬೌಲರ್ ಪಾತ್ರದಲ್ಲಿ ಅನುಷ್ಕಾ ಶರ್ಮಾ

ಯಾರಾದರೂ ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳದೇ ಇದ್ದರೆ ತಕ್ಷಣವೇ ಪಡೆದುಕೊಳ್ಳಿ ಎಂದು ನಾನು ಒತ್ತಾಯಿಸುತ್ತೇನೆ. ಏಕೆಂದರೆ ನಾವು ಲಸಿಕೆ ಹಾಕಿಸಿಕೊಂಡರೆ ತೀವ್ರವಾದ ರೋಗಲಕ್ಷಣಗಳು ಮತ್ತು ಆಸ್ಪತ್ರೆಗೆ ದಾಖಲಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ದಯವಿಟ್ಟು ಕೋವಿಡ್ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ ಅಭಿಮಾನಿಗಳು ಬೇಗ ಗುಣಮುಖರಾಗಿ ಬರುವಂತೆ ಹಾರೈಸುತ್ತಿದ್ದಾರೆ. ಜೂನಿಯರ್ ಎಸ್‍ಟಿಆರ್ ಸಹ ಈ ಸುದ್ದಿ ಓದಿ, ಬೇಗ ಗುಣಮುಖರಾಗಿ ಬನ್ನಿ ಅಣ್ಣ ಎಂದು ಕಾಮೆಂಟ್ ಮಾಡಿದ್ದಾರೆ.

ಇತ್ತೀಚೆಗೆ ಮಹೇಶ್ ಬಾಬು ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾವನ್ನು ನೋಡಿ ಹೊಗಳಿದ್ದರು. ಅಲ್ಲು ಅವರ ನಟನೆಯನ್ನು ಅದ್ಭುತವಾಗಿತ್ತು ಎಂದು ಪ್ರಶಂಸಿದ್ದರು. ಇದನ್ನೂ ಓದಿ: ಮೋದಿ ಮೇಲೆ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿ: ಕಂಗನಾ

ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿ ಪಾಠ’ ಸಿನಿಮಾವನ್ನು ಈ ವರ್ಷ ಜನವರಿ 13 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ RRR ಸಿನಿಮಾ ಸಹ ಈ ತಿಂಗಳೇ ಬಿಡುಗಡೆಯಾಗುತ್ತಿದ್ದ ಹಿನ್ನೆಲೆ ಈ ಸಿನಿಮಾವನ್ನು ರಿಲೀಸ್ ಮಾಡುವುದನ್ನು ಮುಂದೂಡಲಾಗಿತ್ತು. ಆದರೆ ದೇಶಾದ್ಯಂತ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳಿಂದಾಗಿ RRR ಸಿನಿಮಾವನ್ನು ಸಹ ಮುಂದೂಡಲಾಗಿದೆ.

Comments

Leave a Reply

Your email address will not be published. Required fields are marked *