ಬಿಕಿನಿ ತೊಟ್ಟು ಪಡ್ಡೆಗಳ ಹಾರ್ಟ್‍ಬೀಟ್ ಹೆಚ್ಚಿಸಿದ ಮಾಳವಿಕಾ ಮೋಹನನ್

ಮುಂಬೈ: ಬಹುಭಾಷಾ ನಟಿ ಮಾಳವಿಕಾ ಮೋಹನನ್ ಅವರು ತುಂಡುಡುಗೆ ತೊಟ್ಟು ಪಡ್ಡೆಗಳ ನಿದ್ದೆ ಕದಿಯುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಾನು ಮತ್ತು ವರಲಕ್ಷ್ಮಿ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಗುರುತಿಸಿಕೊಂಡವರು. ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದಾರೆ. ಪ್ರಸ್ತುತ ಸಿನಿಮಾ ಕೆಲಸಗಳಿಂದ ಅವರು ಬ್ರೇಕ್ ತೆಗೆದುಕೊಂಡು ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಈ ನಟಿ, ಬಿಕಿನಿ ಧರಿಸಿ ಕಡಲ ಕಿನಾರೆಯಲ್ಲಿ ನಿಂತು ಹಾಟ್ ಫೋಸ್‍ಕೊಟ್ಟು ಫೋಟೋ ತೆಗೆಸಿಕೊಂಡಿದ್ದಾರೆ. ಇದನ್ನೂ ಓದಿ:  ಪುಷ್ಪ ಮಾಸ್ ಡೈಲಾಗ್ ಹೇಳಿದ ಡೇವಿಡ್ ವಾರ್ನರ್- Viral Video

 

View this post on Instagram

 

A post shared by Malavika Mohanan (@malavikamohanan_)

ಬೋಲ್ಡ್ ಔಟ್‍ಫಿಟ್‍ಗಳಲ್ಲಿ ಸಿಕ್ಕಾಪಟ್ಟೆ ಹಾಟ್ ಆಗಿ ಮಾಳವಿಕಾ ಕಾಣಿಸಿಕೊಳ್ಳುವುದು ಇದು ಮೊದಲೇನಲ್ಲ. ಈ ಹಿಂದೆಯೂ ಸೋಶಿಯಲ್ ಮೀಡಿಯಾದಲ್ಲಿ ಹಾಟ್ ಫೋಟೋ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಮಾಲ್ಡೀವ್ಸ್ ಪ್ರವಾಸದ ಹಾಟ್ ಫೋಟೋಗಳ ಮೂಲಕವಾಗಿ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ: ಯಾತ್ರಾರ್ಥಿಗಳಿಗಾಗಿ ಪಾಕಿಸ್ತಾನದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಲು ಭಾರತ ಸಿದ್ಧ

 

View this post on Instagram

 

A post shared by Malavika Mohanan (@malavikamohanan_)

ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಪೇಟಾ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಮೂಲಕ ಕಾಲಿವುಡ್‍ಗೆ ಪದಾರ್ಪಣೆ ಮಾಡಿದರು. ಕನ್ನಡ, ಮಲಯಾಳಂ, ಹಿಂದಿ ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ. ಪ್ರಸ್ತುತ ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಮಾಳವಿಕಾ ನಟನೆಯ ಮಾರನ್ ಹಾಗೂ ಯುಧ್ರ ಚಿತ್ರದ ಕೆಲಸಗಳು ನಡೆಯುತ್ತಿವೆ. ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

Comments

Leave a Reply

Your email address will not be published. Required fields are marked *