ತಿರುವನಂತಪುರಂ: ಮಲಯಾಳಂನ ಬಾಲ ನಟಿ, ಟಿಕ್ಟಾಕ್ ವಿಡಿಯೋಗಳ ಮೂಲಕ ಖ್ಯಾತಿ ಪಡೆದಿದ್ದ ಆರುಣಿ ಎಸ್. ಕುರುಪ್(9) ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾಳೆ.
ಮೃತ ಆರುಣಿ ಅಪರಿಚಿತ ಕಾಯಿಲೆಯಿಂದ ಬಳಲುತ್ತಿದ್ದಳು. ಆ ಕಾಯಿಲೆ ಆಕೆಯ ಮೆದುಳಿನ ಮೇಲೆ ಪರಿಣಾಮ ಬೀರಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಆರುಣಿಗೆ ಜ್ವರ ಮತ್ತು ತಲೆನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆರುಣಿಯನ್ನು ತಿರುವನಂತಪುರದ ಎಸ್.ಐ.ಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರುಣಿಯ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಾನ್ನಪ್ಪಿದ್ದಾಳೆ.

ಕಳೆದ ವರ್ಷ ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಆರುಣಿಯ ತಂದೆ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಮೃತ ಆರುಣಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಅನೇಕ ಟಿಕ್ಟಾಕ್ ವಿಡಿಯೋಗಳನ್ನು ಮಾಡಿ ಯೂಟ್ಯೂಬ್ನಲ್ಲಿ ಖ್ಯಾತಿ ಪಡೆದಿದ್ದಳು.
ಆರುಣಿ ಅಪಾರ ಅಭಿಮಾನಿಯ ಬಳಗವನ್ನು ಹೊಂದಿದ್ದು, ಸಾಮಾಜಿಕ ತಾಣಗಳಲ್ಲಿ ಸುಮಾರು 14 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಇದ್ದರು. ಆರುಣಿಯ ಸಾವಿನ ಸುದ್ದಿ ತಿಳಿದ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
https://www.youtube.com/watch?v=OiSVXu97pNI

Leave a Reply