ಯಾದಗಿರಿ: ಪ್ರಿಯಾಂಕ ಗಾಂಧಿ ಅವರು ಅಧಿಕೃತವಾಗಿ ಕಾಲಿಟ್ಟು, ಕಾಂಗ್ರೆಸ್ ಸೇರುತ್ತಿದ್ದಂತೆ ಬಿಜೆಪಿಯವರಿಗೆ ಭಯ ಆರಂಭವಾಯಿತು. ಹೀಗಾಗಿ ದಿನವೂ ಅವರ ವಿರುದ್ಧ ಬಿಜೆಪಿಯ ಕೆಲ ನಾಯಕರು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜಿಲ್ಲೆ ಗುರಮಠಕಲ್‍ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ಅವರು ರಾಜಕೀಯ ಪ್ರವೇಶ ಮಾಡಿದ್ದು, ಪಕ್ಷಕ್ಕೆ ಬಲ ತಂದುಕೊಟ್ಟಿದೆ. ಜೊತೆಗೆ ಪ್ರಿಯಾಂಕ ಗಾಂಧಿ ಪಕ್ಷದ ಪ್ರಮುಖ ಹುದ್ದೆ ವಹಿಸಿದ್ದಕ್ಕೆ ದೇಶದ ಕಾಂಗ್ರೆಸ್ ಯುವ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಖರ್ಗೆ ಹೇಳಿದರು.

ಪ್ರಿಯಾಂಕ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಜಾಪ್ರಭುತ್ವದ ಬಗ್ಗೆ ಪರಿಕಲ್ಪನೆ ಇಲ್ಲದವರು ಈ ರೀತಿ ಮಾತನಾಡುತ್ತಾರೆ. ನಮ್ಮ ದೇಶದ ಬ್ಯಾಂಕ್‍ಗಳ ಹಣವನ್ನು ದೇಶದ ದೊಡ್ಡ ದೊಡ್ಡ ವ್ಯಾಪಾರಸ್ಥರಿಗೆ ಲೋನ್ ನೀಡಲಾಗಿದೆ. ಆದರೆ ಆ ಹಣವನ್ನು ವಸೂಲಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಏನು ಕ್ರಮ ಕೈಗೊಂಡಿದೆ. ಬ್ಯಾಂಕ್‍ಗಳಲ್ಲಿ ನಮ್ಮ ದೇಶದ ಬಡಜನರು, ರೈತರು ಇಟ್ಟ ಹಣ ಲೂಟಿ ಆಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ದೂರಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply