ಬೆಂಗ್ಳೂರಿನಲ್ಲಿ 5ರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನ!

ಬೆಂಗಳೂರು: ಐದು ವರ್ಷದ ಹೆಣ್ಣು ಮಗುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಕಮಲಾನಗರದಲ್ಲಿ ಈ ಘಟನೆ ನಡೆದಿದ್ದು, ಭಾಸ್ಕರ್ ಎಂಬಾತ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಗು ಟಿವಿ ನೋಡೋಕೆ ಬಂದಿದ್ದ ಸಂದರ್ಭದಲ್ಲಿ ಭಾಸ್ಕರ್ ಆಕೆಯನ್ನು ರೇಪ್ ಮಾಡಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

ಆರೋಪಿ ಭಾಸ್ಕರ್ ಕಟ್ಟಿಂಗ್ ಶಾಪ್ ನಡೆಸ್ತಿದ್ದಾನೆ. ಈತ ಟಿವಿ ನೋಡೀಕೆ ಮಗು ಬಂದಾಗ ಚಾಕಲೇಟ್ ನೀಡೋದಾಗಿ ಹೇಳಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಘಟನೆಯನ್ನರಿತ ಕೂಡಲೇ ಬಸವೇಶ್ವರ ನಗರ ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.

ಸದ್ಯ ಆರೋಪಿ ಭಾಸ್ಕರ್ ನನ್ನು ಪೋಕ್ಸೋ ಕೇಸ್ ನಡಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಿದ್ದಾರೆ.

ಏನಿದು ಪೋಕ್ಸೋ ಕಾಯ್ದೆ?
ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಅಧಿನಿಯಮ ಮತ್ತು ನಿಯಮಗಳು(ಪೋಕ್ಸೋ) ಜಾರಿಗೆ ತರಲಾಗಿದೆ. ಪೋಕ್ಸೋ ಪ್ರಕಾರ 18 ವರ್ಷದೊಳಗಿನವರನ್ನು ಮಗು ಎಂದು ಪರಿಗಣಿಸಲಾಗುತ್ತದೆ.  ಅತ್ಯಾಚಾರ, ಗುಪ್ತಾಂಗ ಮುಟ್ಟುವುದು, ಲೈಂಗಿಕತೆಗೆ ಪ್ರಚೋದಿಸುವುದು,ಅಶ್ಲೀಲ ಚಿತ್ರಗಳ ಬಳಕೆ, ಮಗುವಿನ ಅಶ್ಲೀಲ ಚಿತ್ರ ಸಂಗ್ರಹಿಸಿದರೆ ಅದು ಈ ಕಾಯ್ದೆಯ ಪ್ರಕರ ಅಪರಾಧ ಎಂದು ಪರಿಗಣಿಸಲ್ಪಡುತ್ತದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Comments

Leave a Reply

Your email address will not be published. Required fields are marked *