ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಬುಕ್ಕಿ ಅರೆಸ್ಟ್

ಬೆಳಗಾವಿ: ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ರಸದೌತಣ ನೀಡುವ ಇಂಡಿಯನ್ ಪ್ರೀಮಿಯರ್ ಲೀಗ್ ಕೆಲ ದಿನಗಳ ಹಿಂದೆಯಷ್ಟೇ ಆರಂಭವಾಗಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಓರ್ವ ಬುಕ್ಕಿಯನ್ನು ಬೆಳಗಾವಿ ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಮಜಗಾವಿ ಗ್ರಾಮದ ಪವನ್ ಕಾಕತ್ಕರ್ (32) ಬಂಧಿತ ಬುಕ್ಕಿ. ಐಪಿಎಲ್ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ಬೆಳಗಾವಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಪವನ್‌ನನ್ನು ಬೆಳಗಾವಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಇನ್ಸ್‌ಪೆಕ್ಟರ್ ನಿಂಗನಗೌಡ ಪಾಟೀಲ ನೇತೃತ್ವದ ತಂಡ, ಬುಕ್ಕಿ ಪವನ್ ಕಾಕತ್ಕರ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ನಾವು ಎಷ್ಟೇ ದೊಡ್ಡವರಾದರೂ ಶಾಲೆ, ಗುರುಗಳು ಅಂದಾಗ ಗೌರವದ ಭಾವ ಮೂಡುತ್ತೆ: ಆರ್.ಅಶೋಕ್

ಬಂಧಿತನಿಂದ 15,500 ರೂ. ನಗದು, ಬೆಟ್ಟಿಂಗ್ ವಿವರ ಬರೆದ ಕಾಗದ ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡ್ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಬೆಟ್ಟಿಂಗ್ ದಂಧೆ ನಿಯಂತ್ರಣದಲ್ಲಿತ್ತು. ಇದೀಗ ಬುಕ್ಕಿಗಳು ಬೆಟ್ಟಿಂಗ್ ದಂಧೆ ಆರಂಭಿಸಿದ್ದಾರೆ. ಇಲ್ಲಿನ ಬುಕ್ಕಿಗಳು ಹುಬ್ಬಳ್ಳಿ, ಮುಂಬೈ, ಪುಣೆಯ ದೊಡ್ಡ ಬುಕ್ಕಿಗಳ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಇದನ್ನೂ ಓದಿ:  ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ನಡೆಯುತ್ತದೆ: ಕೋಡಿಶ್ರೀ ಭವಿಷ್ಯ

Comments

Leave a Reply

Your email address will not be published. Required fields are marked *