ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ – ಪತ್ನಿಯ ಉಸಿರುಗಟ್ಟಿಸಿ ಹತ್ಯೆಗೈದ ಪತಿ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ (Bengaluru) ಹೆಚ್‍ಎಎಲ್ ಪೊಲೀಸ್ ಠಾಣಾ (HAL Police Station) ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಗಿರಿಜಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲೇ ನೇಣಿಗೆ ಶರಣು

ಗಿರಿಜಾ ಮತ್ತು ನವೀನ್, ಕಳೆದ 8 ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಈ ಸಂಬಂಧ ಹೆಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ – ಶಂಕಿತರು 10 ದಿನ ಎನ್‍ಐಎ ಕಸ್ಟಡಿಗೆ