ಬೆಂಗಳೂರು ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ (Bengaluru) ನಡೆದಿದೆ.

ದೊಡ್ಡಕಲಸಂದ್ರ ಮೆಟ್ರೊ ನಿಲ್ದಾಣದ ಬಳಿ ಸಾಯಂಕಾಲ 5:47ರ ಹೊತ್ತಿಗೆ ಘಟನೆ ನಡೆದಿದೆ. 35 ವರ್ಷ ಮೇಲ್ಪಟ್ಟ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೈಸೂರು ಚಲೋಗೆ ಭರ್ಜರಿ ಆರಂಭ; ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೋಸ್ತಿ ನಾಯಕರು

ಘಟನೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವ್ಯಕ್ತಿ ಆತ್ಮಹತ್ಯೆ ಬಗ್ಗೆ BMRCL ‌ಮೂಲ ಮಾಹಿತಿ ನೀಡಿದೆ. ಹಸಿರು ಮಾರ್ಗದಲ್ಲಿ ಮೆಟ್ರೋ ವ್ಯತ್ಯಯವಾಗಿದೆ. ಸಿಲ್ಕ್ ಇನ್‌ಸ್ಟಿಟ್ಯೂಟ್ ಟು ಯಲಚೇನಹಳ್ಳಿ ನಡುವೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಉಳಿದ ಮಾರ್ಗದಲ್ಲಿ ಮೆಟ್ರೋ ಸೇವೆ ಲಭ್ಯವಿದೆ.