ಬೆಂಗಳೂರು: ಬೈಕ್‍ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ತಾಲೂಕಿನ ಕೆರೆಕತ್ತಿಗನೂರು ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಈ ಅವಘಡದಲ್ಲಿ 32 ವರ್ಷದ ಕಾಂತರಾಜು ಸಾವನ್ನಪ್ಪಿದ್ದಾರೆ. ಇವರು ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಕಾಂತರಾಜು ಮೂಲತಃ ಡಾಬಸ್ ಪೇಟೆ ಬಳಿಯ ಹೆಗ್ಗುಂದ ನಿವಾಸಿಯಾಗಿದ್ದಾರೆ. ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಔಈರ ಗಾಯಗೊಂಡ ಕಾಂತುರಾಜು ಮೃತಪಟ್ಟಿದ್ದಾರೆ. ಘಟನೆಯ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply