ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಕಿಡಿಗೇಡಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ಮೈಸೂರಿನ ರಾಘವೇಂದ್ರ ನಗರದ ನಿವಾಸಿ ಸುರೇಂದ್ರ ಅವರು ತಮ್ಮ ಎರಡು ಕಾರುಗಳನ್ನು ಮನೆ ಮುಂದೆ ನಿಲ್ಲಿಸಿಕೊಂಡಿದ್ದಾರೆ. ಆದರೆ ಸೋಮವಾರ ಮಧ್ಯರಾತ್ರಿ ಕಿಡಿಗೇಡಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದನ್ನೂ ಓದಿ: ಮೈಸೂರಿನಿಂದ ಬಂದ ರಾಯಲ್ ಎನ್ಫೀಲ್ಡ್ ಆಂಧ್ರದಲ್ಲಿ ಸ್ಫೋಟ

ಪರಿಣಾಮ ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಕಾರಿಗೆ ಬೆಂಕಿ ಹಚ್ಚುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಜರಬಾದ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply