ಲಕ್ನೋ: ತಂದೆಯೇ ತನ್ನ ಮೂವರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಲಲಿತ್ ಪುರ್ ಜಿಲ್ಲೆಯ ವೀರ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೂವರು ಹೆಣ್ಣು ಮಕ್ಕಳು 4 ಮತ್ತು 10 ವರ್ಷದ ಒಳಗಿನರಾಗಿದ್ದು, ಅವರಿಗೆ ಸುತ್ತಿಗೆಯಿಂದ ಹೊಡೆದು, ತಲೆಯನ್ನು ಜಜ್ಜಿ ಬಳಿಕ ಸುಡುವ ಮೂಲಕ ವಿಕೃತಿ ಮೆರೆದಿದ್ದಾನೆ.

ಮಕ್ಕಳ ತಲೆಗೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದ ಬಳಿಕ ಗ್ಯಾಸ್ ಸಿಲಿಂಡರ್ ಮೂಲಕ ಅವರಿಗೆ ಬೆಂಕಿಯಿಟ್ಟಿದ್ದಾನೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಕೃತ್ಯ ಎಸಗುವಾಗ ಮಕ್ಕಳ ತಂದೆ ಪದ್ಯಪಾನ ಮಾಡಿದ್ದನು ಅಂತ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಯನ್ನು ಬಂಧಿಸಲಾಗಿದೆ ಅಂತ ಪೊಲೀಸ್ ಅಧೀಕ್ಷಕ ಒಪಿ ಸಿಂಗ್ ತಿಳಿಸಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ತನ್ನ ಮಕ್ಕಳನ್ನು ಗಂಡನ ಬಳಿಯೇ ಬಿಟ್ಟು ಪತ್ನಿ ತವರು ಮನೆಗೆ ಹೋಗಿರುವ ಹತಾಶೆಯಿಂದ ಈ ಕೃತ್ಯ ಎಸಗಿರಬಹುದು ಅಂತ ಪೊಲೀಸರು ಶಂಕಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply