ಮಂಗಳೂರು -ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಹೊರಬಂದ ವಿಮಾನ

ಮಂಗಳೂರು: ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ರನ್ ವೇಯಿಂದ ಹೊರ ಬಂದಿದ್ದು, ಪೈಲಟ್ ಸಮಯಪ್ರಜ್ಞೆಯಿಂದಾಗ ದೊಡ್ಡ ಅನಾಹುತವೊಂದು ತಪ್ಪಿದೆ.

ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್- ಐಎಕ್ಸ್ 384 ವಿಮಾನ ಸಂಜೆ 5.20ಕ್ಕೆ ಲ್ಯಾಂಡ್ ಆಗಬೇಕಿತ್ತು. 181 ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ವಿಮಾನ ರನ್ ವೇಯಿಂದ ಹೊರ ಬಂದು ಟ್ಯಾಕ್ಸ್ ಮಾರ್ಗದಲ್ಲಿ ಬಂದಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾನೆ.

ವಿಮಾನದಲ್ಲಿದ್ದ ಸಿಬ್ಬಂದಿ ಸೇರಿದಂತೆ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್‌ಪೋರ್ಟ್‌  ಮೂಲಗಳು ತಿಳಿಸಿವೆ. ವಿಮಾನ ರನ್ ವೇಯಿಂದ ಹೊರ ಬರಲು ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ವಿಮಾನದ ಸಿಬ್ಬಂದಿ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರ ಕರೆತಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Comments

Leave a Reply

Your email address will not be published. Required fields are marked *