ಮಾವಿನ ಹಣ್ಣು ಎಂದರೆ ಇ‌ಷ್ಟಾನಾ- ಅದರ ಪ್ರಯೋಜನಗಳ ಬಗ್ಗೆ ತಿಳಿದಿದ್ಯಾ?

ಮಾವು ಎಂದರೆ ಭಾರತೀಯರಿಗಂತೂ ಇಷ್ಟವಾದ ಹಣ್ಣು. ಇದು ಹಣ್ಣುಗಳ ರಾಜ ಎಂದೇ ಪ್ರಸಿದ್ಧಿ ಪಡೆದಿದೆ. ತಿನ್ನಲು ರುಚಿಕರವಷ್ಟೇ ಅಲ್ಲದೇ ಸುಗಂಧವನ್ನು ಹೊಂದಿದೆ. ಬೇಸಿಗೆ ಬಂತೆಂದರೆ ಸಾಕು ಮಾರುಕಟ್ಟೆಯಲ್ಲಿ ಮಾವಿನ ಹಣ್ಣುಗಳದ್ದೇ ಕಮಾಲು. ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ಮಾವಿನ ಹಣ್ಣು ಎಂದರೆ ತುಂಬಾ ಇಷ್ಟ. ಈ ಮಾವಿನ ಹಣ್ಣನ್ನು ಮಿತವಾಗಿ ಸೇವಿಸುವುದರಿಂದ ಅನೇಕ ಲಾಭಗಳಿವೆ.

ಜೀರ್ಣಕ್ರಿಯೆಗೆ ಸಹಕಾರಿ: ಮಾವಿನ ಹಣ್ಣು ಹಲವಾರು ಗುಣಗಳನ್ನು ಹೊಂದಿದ್ದು, ಇದನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಇದರಲ್ಲಿ ಅಮೈಲೇಸ್ ಜೀರ್ಣಕಾರಿ ಕಿಣ್ವಗಳಿರುತ್ತವೆ. ಇದರ ಜೊತೆಗೆ ಮಾವಿನಲ್ಲಿ ನೀರು ಮತ್ತು ಆಹಾರದ ನಾರಿನಾಂಶ ಜಾಸ್ತಿಯಾಗಿರುವುದರಿಂದ ಮಲಬದ್ಧತೆ ಮತ್ತು ಅತಿಸಾರದಂತಹ ಜೀರ್ಣಕಾರಿ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಔಷಧಿ ಗುಣಗಳಿರುವ ಏಲಕ್ಕಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ!

ರೋಗ ನಿರೋಧಕ ಶಕ್ತಿ ಹೆಚ್ಚಳ: ಇದರಲ್ಲಿ ವಿಟಮಿನ್ ಪೋಷಕಾಂಶವು ಹೇರಳವಾಗಿರುತ್ತದೆ. ವಿಟಮಿನ್ ಎ, ಬಿ, ಸಿ ಮತ್ತು ಇ ಖನಿಜಗಳು ಹೇರಳವಾಗಿದೆ. ಇವೆಲ್ಲವೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದನ್ನೂ ಓದಿ: ಕೂದಲು ಉದುರುತ್ತಿದೆಯೇ? ಹಾಗಿದ್ದರೆ ಈ ಮನೆ ಮದ್ದುಗಳನ್ನು ಒಮ್ಮೆ ಟ್ರೈ ಮಾಡಿ

ಚರ್ಮದ ಕಾಂತಿ: ಮಾವಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಎ ಹೇರಳವಾಗಿದ್ದು, ಇದು ಚರ್ಮದ ಆರೋಗ್ಯಕ್ಕೆ ಮುಖ್ಯವಾಗಿದೆ. ಮಾವಿನ ಹಣ್ಣುಗಳನ್ನು ಮಿತವಾಗಿ ಸೇವಿಸಿದಾಗ ತ್ವಚೆಯ ಕಾಂತಿ ಹೆಚ್ಚುತ್ತದೆ. ಜೊತೆಗೆ ಇದು ಚರ್ಮದಲ್ಲಿ ಎಣ್ಣೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಚರ್ಮ ಸುಕ್ಕುಗಟ್ಟದಂತೆ ಕಾಪಾಡುತ್ತದೆ.

ಹೃದಯದ ಆರೋಗ್ಯ: ಹೃದಯದ ಆರೋಗ್ಯವನ್ನು ವೃದ್ಧಿಸುವ ಪೋಷಕಾಂಶಗಳು ಮಾವಿನ ಹಣ್ಣಿನಲ್ಲಿ ಅಧಿಕವಾಗಿವೆ. ಮಾವಿನ ಹಣ್ಣಿನಲ್ಲಿ ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್‍ಗಳು ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದರಿಂದಾಗಿ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ನಾಲಿಗೆಗೆ ಕಹಿ ನೀಡುವ ಬೇವು ಆರೋಗ್ಯಕ್ಕೆ ಒಳ್ಳೆಯದು

ತೂಕ ಕಡಿಮೆ: ಮಾವಿನ ಹಣ್ಣನ್ನು ಮಿತವಾಗಿ ಸೇವಿಸುವುದರಿಂದ ತೂಕ ಕಡಿಮೆ ಮಾಡಬಹುದು. ಮಾವಿನಲ್ಲಿ ಕೊಬ್ಬನ್ನು ಕಡಿಮೆ ಮಾಡುವ ಫೈಟೊಕೆಮಿಕಲ್‍ಗಳಿರುತ್ತವೆ. ಇದರ ಜೊತೆಗೆ ನಾರುಗಳು ಹೇರಳವಾಗಿವೆ. ನೀವು ನಾರಿನ ಹಣ್ಣು ಮತ್ತು ತರಕಾರಿಯನ್ನು ಸೇವಿಸಿದಾಗ ಹೆಚ್ಚು ಕಾಲ ಹೊಟ್ಟೆ ತುಂಬಿದ ಅನುಭವ ಆಗುತ್ತಿದೆ. ಇದರಿಂದ ತೂಕವು ಕಡಿಮೆ ಆಗುತ್ತದೆ. ಇದನ್ನೂ ಓದಿ: ಸರ್ವ ರೋಗಕ್ಕೂ ದಾಸವಾಳದಲ್ಲಿದೆ ಮದ್ದು

Comments

Leave a Reply

Your email address will not be published. Required fields are marked *