ನೆರೆ ಸಂತ್ರಸ್ತರ ರಕ್ಷಣೆಗೆ ನೀರಿಗಿಳಿದ ಐಎಎಸ್ ಅಧಿಕಾರಿ-ಟ್ವಿಟ್ಟರ್ ನಲ್ಲಿ ಭಾರೀ ಮೆಚ್ಚುಗೆ

ನವದೆಹಲಿ: ಮಣಿಪುರದ ಐಎಎಸ್ ಅಧಿಕಾರಿ ದಿಲೀಪ್ ಸಿಂಗ್ ನೆರೆ ಸಂತ್ರಸ್ತ ಪರಿಹಾರ ಕಾರ್ಯದಲ್ಲಿ ಸ್ವತಃ ತಾವೇ ಸೊಂಟದವರೆಗಿನ ನೀರಿಗಿಳಿದು ಸಾರ್ವಜನಿಕರ ರಕ್ಷಣೆಗೆ ಮುಂದಾಗಿದ್ದರು. ಸದ್ಯ ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸತತ 48 ಗಂಟೆಗಳ ಕಾಲ ಧಾರಾಕಾರ ಮಳೆ ಸುರಿದ ಪರಿಣಾಮ ಮಣಿಪುರದ ಇಂಫಾಲ್ ನಲ್ಲಿ ಜನವಾಸ ಸ್ಥಳಗಳಿಗೆ ನೀರು ನುಗ್ಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿತ್ತು. ನೆರೆ ಪರಿಹಾರ ಕಾರ್ಯಕ್ಕೆ ಸ್ವತಃ ನೆರೆ ನಿಯಂತ್ರಣ ಕಾರ್ಯದರ್ಶಿಯಾಗಿರುವ ಐಎಎಸ್ ಅಧಿಕಾರಿ ದಿಲೀಪ್ ಸಿಂಗ್ ಅವರಿಗೆ ಸೊಂಟದವರಿಗೆ ನೀರಿತ್ತು. ಈ ನೀರಿಗಿಳಿದು ಜನರ ರಕ್ಷಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು.

ಸಿಂಗ್ ಅವರ ಈ ಕಾರ್ಯವನ್ನು ಸ್ವತಃ ವೀಕ್ಷಿಸುತ್ತಿದ್ದ ಮಣಿಪುರದ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ದಿಲೀಪ್ ಸಿಂಗ್ ನೆರೆ ಸಂತ್ರಸ್ತರ ರಕ್ಷಣೆಯಲ್ಲಿ ತೊಡಗಿರುವ ಈ ಫೋಟೊ ಗಳನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್‍ಲೋಡ್ ಮಾಡಿದ್ದರು. ಹೀಗಾಗಿ ಸದ್ಯ ಐಎಎಸ್ ಅಧಿಕಾರಿ ನೀರಿಗಿಳಿದು ರಕ್ಷಣೆ ಮಾಡುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೇ ದೇಶದಾದ್ಯಂತ ಅವರ ಈ ಕಾರ್ಯವನ್ನು ಶ್ಲಾಘಿಸಿ ಟ್ವೀಟ್ ಗಳ ಹೊಳೆಯೇ ಹರಿದುಬರುತ್ತಿದೆ.

ದಿಲೀಪ್ ಸಿಂಗ್ ಈ ಕಾರ್ಯಕ್ಕೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ದೇಶಕ್ಕೆ ಇಂತಹ ಅಧಿಕಾರಿಗಳು ಬೇಕು. ಇವರು ಯುವಕರಿಗೆ ಮಾದರಿಯಾಗಿದ್ದಾರೆ ಅಂತಾ ಟ್ವೀಟ್ ಮಾಡುವ ಮೂಲಕ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *