ವಾಹನದಲ್ಲಿ ಸಾಗಿಸುತ್ತಿದ್ದ 1ಕೆಜಿ ಗಾಂಜಾ ಪೊಲೀಸರ ವಶ

ಕಾರವಾರ: ಶಿವಮೊಗ್ಗ ಜಿಲ್ಲೆಯ ಸೊರಬಾ ತಾಲೂಕಿನಿಂದ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಶಿರಸಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರಾಟ ಮಾಡಲು ಒಯ್ಯುತಿದ್ದ ಒಟ್ಟು ಒಂದು ಕೆಜಿ 910 ಗ್ರಾಮ್ ತೂಕದ 25 ಸಾವಿರ ಮೌಲ್ಯದ ಗಾಂಜಾವನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ.

ಮಂಜುನಾಥ್ ನಾಯ್ಕ ಹಾಗೂ ವೀರಭದ್ರಪ್ಪ ಬಂಧಿತರಾಗಿದ್ದಾರೆ. ಇವರು ಸೊರಬಾ ತಾಲೂಕಿನ ದೇವನಹಳ್ಳಿ ಗ್ರಾಮದವರಾಗಿದ್ದಾರೆ. 25 ಸಾವಿರ ಬೆಲೆ ಬಾಳುವ 1 ಕೆಜಿ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ: ಎಸ್ ಟಿ ಸೋಮಶೇಖರ್

ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮ ಕಾಲೋನಿಯ ರಸ್ತೆಯಲ್ಲಿ ಬೈಕ್‍ನಲ್ಲಿ ಮಾರಾಟಕ್ಕೆ ಹೊರಟಿದ್ದಾಗ ಕಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ. ಶಿರಸಿ ಉಪ ವಿಭಾಗದ ಡಿ.ವೈ.ಎಸ್.ಪಿ ರವಿ ಡಿ ನಾಯಕ ರವರ ಮಾರ್ಗದರ್ಶನದಲ್ಲಿ ಸಿಪಿಐ ರಾಮಚಂದ್ರ ನಾಯಕ, ಪಿ.ಎಸ್.ಐ ರಾಜಕುಮಾರ್ ಎಸ್ ಉಕ್ಕಲಿ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದೆ. ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮಂಜುನಾಥ್ ಎಂಬುವವನ ವಿರುದ್ಧ ಈ ಹಿಂದೆ ಸುಲಿಗೆ ಪ್ರಕರಣವು ಬನವಾಸಿ ಠಾಣೆಯಲ್ಲಿ ದಾಖಲಾಗಿದೆ.

Comments

Leave a Reply

Your email address will not be published. Required fields are marked *