ಸಿಎಎ ಬೆಂಬಲಿಸಿ ಗಚ್ಚಿನ ಹಿರೇಮಠ ಸ್ವಾಮೀಜಿಯಿಂದ ಮೋದಿಗೆ ಪತ್ರ

ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬೆಂಬಲಿಸಿ ಜಿಲ್ಲೆಯ ಮಸ್ಕಿಯ ಗಚ್ಚಿನ ಹಿರೇಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನಾ ಪತ್ರ ಬರೆದಿದ್ದಾರೆ.

ಗಚ್ಚಿನ ಹಿರೇಮಠದ ಸ್ವಾಮೀಜಿಗಳು ಸಂಸ್ಕೃತದಲ್ಲಿ ಪತ್ರ ಬರೆದಿದ್ದು, ಪ್ರಧಾನಿ ಮೋದಿ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಜನ ಆತಂಕ ಪಡುವ ಅಗತ್ಯವಿಲ್ಲ. ಪ್ರಧಾನಿಗಳು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆಯನ್ನು ಸಲ್ಲಿಸಿ, ಪತ್ರ ಬರೆದಿದ್ದೇನೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ದೇಶದೆಲ್ಲೆಡೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪರ, ವಿರೋಧ ಸಮಾವೇಶ, ಪ್ರತಿಭಟನೆಗಳು ನಡೆಯುತ್ತಿವೆ. ಕಾಂಗ್ರೆಸ್ ಹಾಗೂ ಕೆಲ ಸಂಘಟನೆಗಳು ನಿರಂತರವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಹಿರಂಗ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಗಚ್ಚಿನ ಹಿರೇಮಠದ ಸ್ವಾಮಿಜಿ ಪ್ರಧಾನಿ ಮೋದಿಗೆ ಪತ್ರ ಬರೆದು ಅಭಿನಂದಿಸಿರುವುದು ಮಹತ್ವ ಪಡೆದುಕೊಂಡಿದೆ.

Comments

Leave a Reply

Your email address will not be published. Required fields are marked *