ರಾಯಚೂರಿನಲ್ಲಿ ರಂಜಾನ್ ಸಂಭ್ರಮ ಜೋರು: ಸಾವಿರಾರು ಜನರಿಂದ ಸಾಮೂಹಿಕ ಪ್ರಾರ್ಥನೆ

ರಾಯಚೂರು: ರಂಜಾನ್ ಹಬ್ಬದ ನಿಮಿತ್ತ ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಜನ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಶುಭಾಶಯ ಕೋರುವ ಮೂಲಕ ಹಬ್ಬವನ್ನು ಸಂಭ್ರಮಿಸಿದರು.

ಕೋವಿಡ್ ಕಠಿಣ ನಿಯಮಗಳ ತೆರವಿನ ಬಳಿಕ ಇದೇ ಮೊದಲ ಬಾರಿಗೆ ಹೆಚ್ಚು ಸಂಖ್ಯೆಯಲ್ಲಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಮಾಜಿ ಶಾಸಕ ಸೈಯದ್ ಯಾಸಿನ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿ ಶುಭಾಶಯ ಕೋರಿದರು. ಇದನ್ನೂ ಓದಿ: ರಂಜಾನ್ ಮುನ್ನಾ ದಿನವೇ ಎರಡು ಗುಂಪುಗಳ ಮಧ್ಯೆ ಗಲಾಟೆ – ಇಂಟರ್ನೆಟ್ ಸ್ಥಗಿತ

ಇನ್ನೂ ರಾಯಚೂರು ನಗರ ಮಾತ್ರವಲ್ಲದೆ ಸಿಂಧನೂರು, ದೇವದುರ್ಗ, ಲಿಂಗಸುಗೂರು ಸೇರಿದಂತೆ ಜಿಲ್ಲೆಯ ಎಲ್ಲೆಡೆ ಈದ್ ಉಲ್ ಫಿತರ್‌ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದನ್ನೂ ಓದಿ: ಮೇ 10ರ ಒಳಗಡೆ ಸಿಎಂ ಬದಲಾವಣೆ: ಯತ್ನಾಳ್‌ ಬಾಂಬ್‌

Comments

Leave a Reply

Your email address will not be published. Required fields are marked *