ಜೈಪುರ: 4 ವರ್ಷದ ಮಗುವಿನ ಮೇಲೆ ಸಬ್ ಇನ್ಸ್‌ಪೆಕ್ಟರ್ (Sub Inspector) ಒಬ್ಬ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ (Rajasthan) ದೌಸಾ ಜಿಲ್ಲೆಯಲ್ಲಿ ನಡೆದಿದೆ.
लालसोट में 7 साल की दलित बच्ची के साथ पुलिसकर्मी द्वारा दुष्कर्म की घटना से लोगों में भारी आक्रोश है। मासूम को न्याय दिलाने के लिए मौके पर पहुंच गया हूं। अशोक गहलोत सरकार के नाकारापन से निरंकुश हुई पुलिस चुनाव जैसे संवेदनशील मौके पर भी ज्यादती करने से बाज नहीं आ रही। pic.twitter.com/xnIB13eyWi
— Dr.Kirodi Lal Meena (@DrKirodilalBJP) November 10, 2023
ಘಟನೆ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಯನ್ನ ಹಿಗ್ಗಾಮುಗ್ಗ ಥಳಿಸಿ, ಮೇಲಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸದ್ಯ ಠಾಣೆಯ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಗ್ರಾಮಸ್ಥರು ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನಿಂದ ಬಂದು ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾದ ಮನೀಶ್ ಸಿಸೋಡಿಯಾ
ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಶುಕ್ರವಾರ ಮಧ್ಯಾಹ್ನ ಮಗುವನ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿ ಅತ್ಯಾಚಾರ ಎಸಗಿದ ನಂತರ ಸಮೀಪದಲ್ಲಿ ವಾಸಿಸುವ ಕುಟುಂಬಸ್ಥರು ದೂರು ನೀಡಿದ್ದು, ಎಸ್‌ಐ ಭೂಪೇಂದ್ರ ರಾಹುವಾಸ್ ಪೊಲೀಸ್ ಠಾಣೆಯಲ್ಲಿ (Rahuwas Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಐವರು ಸಾವು, 60 ಮಂದಿಗೆ ಗಾಯ
ಸದ್ಯ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ- 6 ಗ್ಯಾರಂಟಿ ಘೋಷಿಸಿದ ತೆಲಂಗಾಣ ಕಾಂಗ್ರೆಸ್
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ (BJP MP) ಕಿರೋಡಿ ಲಾಲ್ ಮೀನಾ ಮಾತನಾಡಿ, ಪುಟ್ಟ ದಲಿತ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದ ನಂತರ ಜನ ರೊಚ್ಚಿಗೆದ್ದಿದ್ದಾರೆ. ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ. ಸಂತ್ರಸ್ತ ಮಗುವಿನ ಕುಟುಂಬಕ್ಕೆ ನ್ಯಾಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೇ ಸಂತ್ರಸ್ತ ಮಗುವಿನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
