ಸಿಎಎ, ಎನ್‌ಆರ್‌ಸಿ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಾಳೆ ಬೃಹತ್ ಪ್ರತಿಭಟನೆ

ಚಿಕ್ಕಬಳ್ಳಾಪುರ: ನಾಳೆ(ಮಂಗಳವಾರ) ಚಿಕ್ಕಬಳ್ಳಾಪುರದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲು ಸಕಲ ತಯಾರಿಗಳನ್ನು ನಡೆಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಮುಸ್ಲಿಂ ಪೋರಂ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಪ್ರತಿಭಟನೆಗೆ ಅನುಮತಿ ಪಡೆದಿದ್ದು, ಮಂಗಳವಾರ ಪ್ರತಿಭಟನೆಗೆ ಸಂಘಟಕರು ಸಕಲ ತಯಾರಿ ನಡೆಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಮಂಗಳವಾರ ಪ್ರತಿಭಟನೆ ಅಂಗವಾಗಿ ಇಂದು ಎಸ್‍ಪಿ ಅಭಿನವ್ ಕರೆ ನೇತೃತ್ವದಲ್ಲಿ ಪೊಲೀಸ್ ಪರೇಡ್ ನಡೆಸಲಾಗಿದೆ.

ಮಂಗಳವಾರದ ಬಂದೋಬಸ್ತ್ ಗಾಗಿ 4 ಕೆಎಸ್‍ಆರ್ ಪಿ ತುಕಡಿ, 9 ಡಿಎಆರ್ ತುಕಡಿ ಸೇರಿದಂತೆ ಕೇಂದ್ರವಲಯದ ಇತರೆ ಜಿಲ್ಲೆಗಳ 150 ಮಂದಿ ಹೆಚ್ಚುವರಿ ಸಿಬ್ಬಂದಿ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಬಂದೋಬಸ್ತ್‍ಗೆ ನಿಯೋಜಿಸುತ್ತಿರುವುದಾಗಿ ಎಸ್ ಪಿ ಅಭಿನವ್ ಕರೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

Comments

Leave a Reply

Your email address will not be published. Required fields are marked *