ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ ಬಿಜೆಪಿ ತೆಕ್ಕೆಗೆ

ಧಾರವಾಡ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ-ಧಾರವಾಡ ಬಿಜೆಪಿ ತೆಕ್ಕೆಗೆ ಜಾರಿದೆ. ಮೂರೂವರೆ ವರ್ಷಗಳ ಬಳಿಕ ಮೇಯರ್ ಉಪಮೇಯರ್ ಸ್ಥಾನ ಭರ್ತಿಯಾಗಿವೆ.

ಮೇಯರ್ ಆಗಿ ಈರೇಶ ಅಂಚಟಗೇರಿ ಆಯ್ಕೆಯಾದರೆ, ಉಪಮೇಯರ್ ಆಗಿ ಉಮಾ ಮುಕುಂದ ಆಯ್ಕೆ ಆಗಿದ್ದಾರೆ. ಕೈ ಎತ್ತುವ ಮೂಲಕ 50 ಮತಗಳನ್ನು ಪಡೆದ ಮೇಯರ್, ಉಪಮೇಯರ್ ಆಯ್ಕೆ ಮಾಡಲಾಯಿತು. ವೋಟಿಂಗ್‍ನಲ್ಲಿ ಪಾಲಿಕೆಯ ಸದಸ್ಯರು, ಜೋಶಿ, ಶೆಟ್ಟರ್ ಸೇರಿದಂತೆ ಪಾಲಿಕೆಯ ವ್ಯಾಪ್ತಿಯ ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಮಹಾನಗರ ಪಾಲಿಕೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಬಣ್ಣ ಎರಚಿ ಸಂಭ್ರಮಿಸಿದರು.

82 ಸಂಖ್ಯಾಬಲವುಳ್ಳ ಪಾಲಿಕೆಯಲ್ಲಿ ಬಹುಮತಕ್ಕೆ 42 ಬೇಕಿತ್ತು. ಚುನಾವಣೆಯಲ್ಲಿ ಕ್ರಮವಾಗಿ ಬಿಜೆಪಿ 39, ಕಾಂಗ್ರೆಸ್ 33 ಜೆಡಿಎಸ್ 01 ಎಐಎಂಐಎಂ 3 ಪಕ್ಷೇತರರು 6 ಸ್ಥಾನ ಗಳಿಸಿದ್ದರು. ಇದನ್ನೂ ಓದಿ: ಸಂಜೆ 7 ರಿಂದ ಬೆಳಗ್ಗೆ 6 ರವರೆಗೆ ಮಹಿಳೆ ಉದ್ಯೋಗಿಗಳನ್ನು ದುಡಿಸುವಂತಿಲ್ಲ: ಯೋಗಿ ಆದೇಶ

5 ಶಾಸಕರು, 1 ಎಂಪಿ, 1 ವಿಧಾನ ಪರಿಷತ್ ಸದಸ್ಯರಿಗೆ ಮತದಾನದ ಅವಕಾಶ ಹಿನ್ನೆಲೆಯಲ್ಲಿ ಬಿಜೆಪಿ ಸಂಖ್ಯಾ ಬಲ 45ರ ಜೊತೆಗೆ ಇಬ್ಬರು ಪಕ್ಷೇತರರು ಸೇರ್ಪಡೆಯಾಗಿದ್ದು, ಸಂಖ್ಯಾ ಬಲ 47 ಇತ್ತು. ಮೇಯರ್ ಆಯ್ಕೆಗೆ ಶುಕ್ರವಾರ ಪ್ರಹ್ಲಾದ್‌ ಜೋಷಿ ನೇತೃತ್ವದಲ್ಲಿ ಸಭೆ ಕೂಡ ನಡೆದಿತ್ತು.

Comments

Leave a Reply

Your email address will not be published. Required fields are marked *