ಕೈ ಶಾಸಕ ಎಂ.ಬಿ ಪಾಟೀಲ್ ರಾಜೀನಾಮೆ?

ಪಬ್ಲಿಕ್ ಟಿವಿ
ಬೆಂಗಳೂರು:  ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಎಂ.ಬಿ ಪಾಟೀಲ್  ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ತನ್ನ ಮೊದಲ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಸಚಿವ ಎಂ.ಬಿ ಪಾಟೀಲ್ ಹೆಸರು ಇತ್ತು. ಆದರೆ ಇಂದು ಪ್ರಮಾಣವಚನ ಸ್ವೀಕರಿಸುವ ಶಾಸಕರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ ಎಂಬಿ ಪಾಟೀಲ್ ಶಾಸಕ ಸ್ಥಾನ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಶಾಸಕರ ನಿವಾಸ ಮುಂದೆ ಎಂ.ಬಿ ಪಾಟೀಲ್ ಮನೆ ಮುಂದೆ ಬೆಂಬಲಿಗರು ಪ್ರತಿಭಟನೆ ಮುಂದಾಗಿದ್ದರು. ಮನೆಯ ಮುಂದೆ ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಪಾಟೀಲ್ ಅಭಿಮಾನಿಗಳು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜೀನಾಮೆ ಸಂಬಂಧ ಎಂಬಿ ಪಾಟೀಲ್ ಮಧ್ಯಾಹ್ನ ಸ್ಪೀಕರ್ ರಮೇಶ್ ಕುಮಾರ್ ಅವರ ಬಳಿ ಭೇಟಿಗೆ ಸಮಯ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷಕ್ಕಾಗಿ ಸಮುದಾಯವನ್ನೇ ಎದುರು ಹಾಕಿಕೊಂಡು ಕೆಲಸ ಮಾಡಿದ್ದಾನೆ. ಈಗ ಸಚಿವ ಸ್ಥಾನ ನೀಡದೇ ದ್ರೋಹ ಮಾಡಲಾಗಿದೆ ಎಂದು ತಮ್ಮ ಆಪ್ತರ ಜೊತೆ ಬೇಸರವನ್ನು ಪಾಟೀಲ್ ವ್ಯಕ್ತ ಪಡಿಸಿದ್ದಾರೆ.

ಸಚಿವ ಸ್ಥಾನ ಕೈ ತಪ್ಪಿತು ಯಾಕೆ ಅಂತಾ ಗೊತ್ತಿಲ್ಲ. ಆದ್ದರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಜೊತೆ ಮಾತನಾಡಿ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಹೇಳಿದ್ದಾರೆ.

https://www.youtube.com/watch?v=lmfSCduJDBM

Comments

Leave a Reply

Your email address will not be published. Required fields are marked *