ನಾನು ಯಾವಾಗ್ಲೂ ಪವರ್ ಫುಲ್: ಎಂ.ಬಿ.ಪಾಟೀಲ್

ವಿಜಯಪುರ: ಮಂತ್ರಿ ಇದ್ದಾಗಲೂ ಪವರ್ ಇತ್ತು, ಇಲ್ಲದಿದ್ದಾಗಲೂ ಪವರ್ ಇರುತ್ತದೆ ಎಂದು ಮಾಜಿ ಸಚಿವ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಂತ್ರಿ ಸ್ಥಾನ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ಎಂ.ಬಿ.ಪಾಟೀಲ್ ಅವರು ಇದೆ ಮೊದಲ ಬಾರಿಗೆ ಸ್ವಕ್ಷೇತ್ರದ ಗ್ರಾಮ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರೆಗೆ ಆಗಮಿಸಿದ್ದರು. ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವರು, ದುರ್ಗಾ ದೇವಿ ಶಕ್ತಿ ನನ್ನ ಹಿಂದೆ ಇದೆ. ನನಗೆ ಈಗ ಕೇವಲ 54 ವರ್ಷ ವಯಸ್ಸು ಅಷ್ಟೇ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಕಾಲ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ವಾಭಾವಿಕವಾಗಿ ಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ದುರಾಸೆ ಇಲ್ಲ ಎಂದು ಹೇಳುವ ಮೂಲಕ ತಾವು ಸಿಎಂ ಸ್ಥಾನದ ಆಕಾಂಕ್ಷಿ ಎನ್ನುವುದನ್ನು ಎಂ.ಬಿ.ಪಾಟೀಲ್ ಅವರು ಹೊರ ಹಾಕಿದ್ದಾರೆ.

Comments

Leave a Reply

Your email address will not be published. Required fields are marked *