ಮಂಗಳೂರು: ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಬಗ್ಗೆ ಮಾತನಾಡುವುದೇ ತಪ್ಪೆನಿಸುತ್ತದೆ. ಇಂಥವರು ಕನಿಷ್ಠ ಪಂಚಾಯತ್ ಸದಸ್ಯರಾಗಲೂ ಯೋಗ್ಯರಲ್ಲ ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿರಲು ಬಯಸುತ್ತಾರೆ. ಅವರಿಗೆ ಸಂಸತ್ ಹಾಗೂ ಸಂವಿಧಾನದ ಬಗ್ಗೆ ಗೌರವವಿಲ್ಲ. ಸಂವಿಧಾನವನ್ನೇ ಬದಲಾಯಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಇಂಥವರು ಸಂಸತ್ ಸದಸ್ಯರಾಗಲು ಯೋಗ್ಯರಲ್ಲ. ಕನಿಷ್ಠ ಪಂಚಾಯತ್ ಸದಸ್ಯರಾಗಲೂ ಅರ್ಹ ವ್ಯಕ್ತಿಯಲ್ಲ ಎಂದು ಎಂ.ಬಿ ಪಾಟೀಲ್ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ

ಕೋಮು ಘರ್ಷಣೆ ಆರಂಭಿಸಲು ಇಂಥಹ ಹೇಳಿಕೆಯನ್ನು ಅನಂತ್ ಕುಮಾರ್ ಹೆಗ್ಡೆ ಅವರು ನೀಡುತ್ತಾರೆ. ಸಂವಿಧಾನಕ್ಕೆ ಗೌರವಿಸದವರಿಗೆ ಲೋಕಸಭೆ ಚುನಾವಣೆಯಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದರು. ಇದನ್ನೂ ಓದಿ: ಟ್ವಿಟ್ಟರ್ ವಾರ್- ವೈಯಕ್ತಿಕ ನಿಂದನೆ ವಿರುದ್ಧ ಗುಡುಗಿದ ದಿನೇಶ್ ಗುಂಡೂರಾವ್
ಭಾನುವಾರದಂದು ಮಡಿಕೇರಿಯಲ್ಲಿ ಪರಿವರ್ತನಾ ಟ್ರಸ್ಟ್, ಹಿಂದೂ ಜಾಗರಣ ವೇದಿಕೆ ನಡೆಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಜಾತಿ ವಿಷಬೀಜ ಸಮಾಜದಲ್ಲಿ ಸೇರಿಕೊಂಡ ಬಳಿಕ ನಾವು ನಿರ್ಮಾಣ ಮಾಡಿದ್ದನ್ನು ನಮ್ಮದು ಎಂದು ಹೇಳಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದೇವೆ. ನಮ್ಮ ಹಿಂದೂಗಳು ಒಗ್ಗಟ್ಟಾಗಿ ನಿಲ್ಲದೇ ಇದ್ದರೆ ಏನಾಗುತ್ತದೆ ಎಂಬುವುದನ್ನು ಇತಿಹಾಸ ನೋಡಿದರೆ ನಮಗೆ ಅರಿವಾಗುತ್ತದೆ. ಆದ್ದರಿಂದ ಜಾತಿ ಪ್ರಶ್ನೆ ಇಲ್ಲದೆ ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು ಎಂದು ಹೇಳಿಕೆ ನೀಡಿದ್ದರು.
https://www.youtube.com/watch?v=Qixi3UPIbZQ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply