ಮೇಕೆದಾಟು ಪಾದಯಾತ್ರೆ ಪ್ರಾರಂಭವಾಗಿದ್ದೇ ಮೊದಲು ದೇವೇಗೌಡರಿಂದ: ಕುಮಾರಸ್ವಾಮಿ

KUMARASWAMY

ರಾಮನಗರ: ಮೇಕೆದಾಟು ಪಾದಯಾತ್ರೆ ಪ್ರಾರಂಭವಾಗಿದ್ದೆ ಮೊದಲು ಮಾಜಿ ಪ್ರಧಾನಿ ದೇವೇಗೌಡರಿಂದ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಡದಿಯಲ್ಲಿ ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು 2013 ರಲ್ಲಿ ಪಾದಯಾತ್ರೆ ಮಾಡಿದ್ದರು. ಪ್ರತಿವರ್ಷ 10 ಸಾವಿರ ಕೋಟಿ ಕೊಡುತ್ತೇವೆಂದು ಹೇಳಿದ್ದರು. ಈಗ 5 ವರ್ಷಕ್ಕೆ 8 ಸಾವಿರ ಕೋಟಿ ಕೊಟ್ಟಿದ್ದಾರೆ. 8 ಸಾವಿರ ಕೋಟಿಯಲ್ಲಿ ರೈತರ ಜಮೀನಿಗೆ ಒಂದು ಹನಿ ನೀರು ಹೋಯಿತಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

ಇವರು ಮೇನ್ ಕೆನಲ್ ಮಾಡಲಿಲ್ಲ. ಗುತ್ತಿಗೆದಾರರ ಜೊತೆ ಸೇರಿ ದುಡ್ಡು ಹಂಚಿಕೊಂಡಿದ್ದೇ ಇವರ ಸಾಧನೆ. ಈಗ ಮೇಕೆದಾಟು ಬಗ್ಗೆ ರೌಂಡ್ ಹಾಕಿಕೊಂಡು ಬರುತ್ತಾರಂತೆ. ಕನಕಪುರ, ರಾಮನಗರ, ಬಿಡದಿ ಮಾರ್ಗವಾಗಿ 9 ದಿನ ಪಾದಯಾತ್ರೆ ಅಂತೆ. ಯಾವ ಪುರುಷಾರ್ಥಕ್ಕೆ ಇವರು ಪಾದಯಾತ್ರೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಕೊಟ್ಟ ನೀರಾವರಿಗೂ ನಿಮ್ಮ ಬೂಟಾಟಿಕೆಗೂ ಬಹಳ ವ್ಯತ್ಯಾಸವಿದೆ. ಪಾದಯಾತ್ರೆ ಪ್ರಾರಂಭವಾಗಿದ್ದೆ ಮೊದಲು ದೇವೇಗೌಡರಿಂದ. ಈಗ ಅದನ್ನ ಹೈಜಾಕ್ ಮಾಡಿಕೊಂಡು ಈ ಭಾಗದ ಜನರನ್ನ ಮರಳು ಮಾಡಲು ಹೊರಟ್ಟಿದ್ದಾರೆ. ಈ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಮೇಕೆದಾಟು ಅನುಷ್ಠಾನ ತರಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅದು ನಮ್ಮ ಪಕ್ಷ ಜಾತ್ಯಾತೀತ ಜನತಾ ದಳದಿಂದ ಮಾತ್ರ ಸಾಧ್ಯ. ನಾವು ಮೊದಲೇ ರಾಜ್ಯಪಾಲರಿಗೂ ಮನವಿ ಕೊಟ್ಟಿದ್ದೆವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಈ ಬಗ್ಗೆ ಮನವಿ ಕೊಟ್ಟಿದ್ದೆವು. ಪಕ್ಷದ ವತಿಯಿಂದ ದೊಡ್ಡ ಹೋರಾಟ ಮಾಡುತ್ತೇವೆಂದು ಹೇಳಿದ್ದೆವು. ಇಗ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತೇವೆಂದು ತರಾತುರಿಯಲ್ಲಿ ಹೊರಟ್ಟಿದ್ದಾರೆ ಎಂದರು. ಇದನ್ನೂ ಓದಿ: ಹೈಡ್ರಾಮಾ ಮಾಡುತ್ತಿದ್ದ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿದ ಆಶಾ ಕಾರ್ಯಕರ್ತೆಯರು

ಕಾಂಗ್ರೆಸ್‍ನವರು ಪಾದಯಾತ್ರೆ ಮಾಡುತ್ತಿರೋದು ಮತಕ್ಕಾಗಿ. ದೇವೇಗೌಡರನ್ನ ಹೊರತಾಗಿ ಇನ್ಯಾವ ಕಾಂಗ್ರೆಸ್ ನಾಯಕರಿಂದ ಸಹ ನೀರಾವರಿಗೆ ಆದ್ಯತೆ ಸಿಕ್ಕಿಲ್ಲ. ಜೆಡಿಎಸ್ ಪಕ್ಷದ ನಿಲುವು ಮೇಕೆದಾಟು ಅಣೆಕಟ್ಟು ಕಟ್ಟಲೇಬೇಕು. ಟೆಕ್ನಿಕಲ್ ಪಾಯಿಂಟ್ ಇಟ್ಟುಕೊಂಡು ಕೆಲಸ ಶುರುಮಾಡಬೇಕು. ಆದರೆ ಇವರಿಗೆ ಪ್ರಚಾರ ಬೇಕಿದೆ ಅಷ್ಟೇ ಎಂದು ಸಿಡಿದರು.

 

Comments

Leave a Reply

Your email address will not be published. Required fields are marked *