ಮೇಕೆದಾಟು ಯೋಜನೆ ವಿರುದ್ಧ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋದ ತಮಿಳುನಾಡು

ನವದೆಹಲಿ: ಮೇಕೆದಾಟು ಯೋಜನೆಗೆ ಕರ್ನಾಟಕದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರ ಇದೀಗ ಮತ್ತೊಂದು ಅಡ್ಡಿಗೆ ಮುಂದಾಗಿದೆ. ವಿಸ್ತೃತ ಯೋಜನಾ ವರದಿ(ಡಿಪಿಆರ್) ತಿರಸ್ಕರಿಸಲು ಸುಪ್ರೀಂಕೋರ್ಟ್‍ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.

ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ಕರ್ನಾಟಕ ಇದೀಗ ಯೋಜನೆಯನ್ನು ನಾವು ಆರಂಭಿಸುತ್ತೇವೆ ಎಂದು ಪಟ್ಟುಹಿಡಿದಿದೆ. ಈಗಾಗಲೇ ಮೇಕೆದಾಟು ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಆಗಿದ್ದು, ಶೀಘದಲ್ಲೇ ಕೇಂದ್ರದ ಜೊತೆ ಅನುಮತಿ ಪಡೆದು ಯೋಜನೆ ಆರಂಭಿಸುತ್ತೇವೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇವೆಲ್ಲದರ ನಡುವೆ ತಮಿಳುನಾಡು ಸರ್ಕಾರ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯಲ್ಲಿ ಡಿಪಿಆರ್ ತಿರಸ್ಕರಿಸಲು ಸೂಚಿಸುವಂತೆ ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ಮೇಕೆದಾಟು, ಮಹದಾಯಿ ಯೋಜನೆ ಪ್ರಾರಂಭಿಸುತ್ತೇವೆ: ಸಿಎಂ ಬೊಮ್ಮಾಯಿ

BASAVARAJ BOMMAI

9,000 ಕೋಟಿ ವೆಚ್ಚದಲ್ಲಿ 76.16 ಟಿಎಂಸಿ ನೀರು ಸಂಗ್ರಹಣೆ ಉದ್ದೇಶದಿಂದ ಜಲಾಶಯ ನಿರ್ಮಿಸಲು ಕರ್ನಾಟಕ ಮುಂದಾಗಿದೆ. ವಿದ್ಯುತ್ ಉತ್ಪಾದನೆಯನ್ನು ಮಾಡಲು ಕರ್ನಾಟಕ ಯೋಜನೆ ರೂಪಿಸಿದೆ. ಈ ಯೋಜನೆ ನ್ಯಾಯಲಯದ ಆದೇಶ ಉಲ್ಲಂಘಿಸಿದ್ದು, ಈ ಯೋಜನೆಗೆ ಕೂಡಲೇ ತಡೆ ನೀಡಬೇಕು. ಕರ್ನಾಟಕಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಬೇಕು ಮತ್ತು ಕರ್ನಾಟಕ ಸಲ್ಲಿಸಿರುವ ಡಿಪಿಆರ್‍ ನ್ನು ಕೇಂದ್ರ ಜಲ ಆಯೋಗ(ಸಿಡಬ್ಲ್ಯೂಸಿ)ತಿರಸ್ಕರಿಸಲು ಸೂಚಿಸಬೇಕು ಪ್ರಕರಣ ಅಂತ್ಯವಾಗುವವರೆಗೂ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಯಾವುದೇ ಅನುಮತಿ ನೀಡದಂತೆ ಸೂಚಿಸಬೇಕು ಎಂದು ತಮಿಳುನಾಡು ಮನವಿ ಸಲ್ಲಿಸಿದೆ. ಇದನ್ನೂ ಓದಿ: ಮೇಕೆದಾಟು ವಿಚಾರ – ಉಪವಾಸ ಸತ್ಯಾಗ್ರಹ ಮಾಡ್ತೀವಿ ಎಂದಿರೋ ಅಣ್ಣಾಮಲೈಗೆ ಬೊಮ್ಮಾಯಿ ತಿರುಗೇಟು

 

 

Comments

Leave a Reply

Your email address will not be published. Required fields are marked *